Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಂಗ್ರೆಸ್ ಟಿಕೆಟ್ ಘೋಷಣೆ ಬಳಿಕ ದಾವಣಗೆರೆಯಲ್ಲಿ ಅಸಮಾಧಾನ :  ಪ್ರತಿಭಟನೆ?

---Advertisement---

ದಾವಣಗೆರೆ : ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಗೊಂದಲಕ್ಕೆ ತೆರೆ ಬಿದ್ದಿದ್ದರೂ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಪಕ್ಷವು ಶಾಮನೂರು ಕುಟುಂಬದ ಸಮರ್ಥ್ ಅವರಿಗೆ ಅಭ್ಯರ್ಥಿತ್ವ ನೀಡಿದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಶಾಮನೂರು ಕುಟುಂಬ ಮತ್ತು ಅಲ್ಪಸಂಖ್ಯಾತ ನಾಯಕರು ನಡುವೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಶಾಮನೂರಿಗೆ ಕಾಂಗ್ರೆಸ್ ಹೈಕಮಾಂಡ್ ಬಿ-ಫಾರಂ ನೀಡಿದೆ. ಈ ನಿರ್ಧಾರ ಹೊರಬಿದ್ದ ತಕ್ಷಣವೇ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ.

ನಗರದ ಅಖ್ತರ್ ರಝಾ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ‘ಜಸ್ಟಿಸ್ ಫಾರ್ ಮೈನಾರಿಟೀಸ್’ ಹಾಗೂ ‘ಜಸ್ಟಿಸ್ ಫಾರ್ ಅಹಿಂದ’ ಎಂಬ ಘೋಷಣೆಗಳನ್ನು ಕೂಗುತ್ತ, ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ರಾಜ್ಯ ಉಸ್ತುವಾರಿ Randeep Singh Surjewala ಹಾಗೂ ಉಪ ಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ, ಟಿಕೆಟ್ ನಿರೀಕ್ಷಿಸಿದ್ದ ಮುಸ್ಲಿಂ ಮುಖಂಡ ಸಾದಿಕ್ ಪೈಲ್ವಾನ್ ಅವರಿಗೆ ಅವಕಾಶ ಸಿಗದ ಹಿನ್ನೆಲೆ ಅವರು ಸ್ವತಂತ್ರವಾಗಿ ಸ್ಪರ್ಧಿಸಲು ಸನ್ನದ್ಧರಾಗಿರುವುದಾಗಿ ಘೋಷಿಸಿದ್ದಾರೆ. ಹಲವು ವರ್ಷಗಳಿಂದ ಕಾಂಗ್ರೆಸ್‌ಗೆ ಸೇವೆ ಸಲ್ಲಿಸಿದ್ದರೂ ಅನ್ಯಾಯವಾಗಿದೆ ಎಂದು ಅವರು ಆರೋಪಿಸಿ, ಈ ಬಾರಿ ಪಕ್ಷಕ್ಕೆ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬಳಿಕ ಉಂಟಾದ ಅಸಮಾಧಾನ ಉಪಚುನಾವಣೆಯ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now