Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳಿಗೆ ವೇಗ : ಕಿರಣ್ ಕುಮಾರ್.ಜಿ

---Advertisement---

ಸುದ್ದಿಒನ್ , ಚಿತ್ರದುರ್ಗ.ಮಾ.23 : ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಅಗತ್ಯ ಸಹಕಾರ ನೀಡಿದ್ದು, ಕಾಮಗಾರಿಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಿರಣ್ ಕುಮಾರ್.ಜಿ ಹೇಳಿದರು.

 

ಭದ್ರಾ ಮೇಲ್ದಂಡೆ ಯೋಜನೆಯ ಬುರುಜನರೊಪ್ಪ ಉಪವಿಭಾಗ ಕಛೇರಿಗೆ ಸಹಾಯಕ ಕಾರ್ಯಪಾಲಕ ಇಂಜಿಯರ್ ಆಗಿ ಬಡ್ತಿ ಹೊಂದಿರುವ ಕಿರಣ್ ಕುಮಾರ್.ಜಿ ಈಚೇಗೆ ಪದಗ್ರಹಣ ಸ್ವೀಕರಿಸಿ ಮಾತನಾಡಿದರು.

 

ಮೈಸೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ನಲ್ಲಿ ಎರಡು ಬಂಗಾರ ಪದಕಗಳೊಂದಿಗೆ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ್ ಕುಮಾರ್.ಜಿ ಆಲಮಟ್ಟಿ ನೀರಾವರಿ ಯೋಜನೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಭದ್ರಾ ಮೇಲ್ಡಂಡೆ ಯೋಜನೆಯಲ್ಲಿ ಏಳು ವರ್ಷಗಳ ಕೆಲಸದ ಅನುಭವ ಹೊಂದಿರುತ್ತಾರೆ. ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರು ವಾಸಿಯಾಗಿದ್ದಾರೆ. ಜಿಲ್ಲೆಯ ರೈತರಿಗೆ ಅತ್ಯಂತ ಪ್ರಮುಖವಾದ ಭದ್ರ ಮೇಲ್ದಂಡೆ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಇವರ ಅನುಭವ ಸಹಕಾರಿಯಾಗಲಿದೆ.
ಭದ್ರಾ ಮೇಲ್ದಂಡೆ ಯೋಜನೆಗೆ ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಸಚಿವಾಲಯದ ತಾಂತ್ರಿಕ ಸಲಹಾ ಸಮಿತಿಯಿಂದ ಮಹತ್ವದ ಅನುಮೋದನೆ ದೊರೆತಿರುವುದು ಗಮನಾರ್ಹವಾಗಿದೆ.

ಶಾಸಕ ವೀರೇಂದ್ರ ಪಪ್ಪಿ ಕಿರಣ್ ಕುಮಾರ್.ಜಿ ಶುಭಾಶಯ ಕೋರಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಹಾಗೂ ಅವುಗಳಿಗೆ ಇನ್ನಷ್ಟು ವೇಗ ನೀಡುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚಿಸಿದರು. ಜೊತೆಗೆ, ಬರಪೀಡಿತ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪದಗ್ರಹಣ ವೇಳೆ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದು, ಕಿರಣ್ ಕುಮಾರ್ ಅವರಿಗೆ ಶುಭಾಶಯ ಕೋರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...