Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

Breking: ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಹೊಸ ತಿರುವು!

---Advertisement---

ಕರ್ನಾಟಕವನ್ನು ಬೆಚ್ಚಿಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಸುಮಾರು 14 ವರ್ಷಗಳ ಬಳಿಕ ಪ್ರಕರಣ ಮತ್ತೆ ಚರ್ಚೆಗೆ ಬಂದಿದ್ದು, ಸುಪ್ರೀಂ ಕೋರ್ಟ್ ಸಿಬಿಐಗೆ ತನಿಖಾ ವರದಿ ಸಲ್ಲಿಸಲು ಸೂಚಿಸಿದೆ.2012ರ ಅಕ್ಟೋಬರ್‌ನಲ್ಲಿ ಧರ್ಮಸ್ಥಳದ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ನಾಪತ್ತೆಯಾಗಿದ್ದು, ಮರುದಿನ ಅರಣ್ಯ ಪ್ರದೇಶದಲ್ಲಿ ಆಕೆಯ ಶವ ಪತ್ತೆಯಾಗಿತ್ತು. ನಂತರ ನಡೆದ ತನಿಖೆಯಲ್ಲಿ ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬುದು ದೃಢಪಟ್ಟಿತ್ತು.

ಪ್ರಕರಣದ ಪ್ರಾರಂಭಿಕ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ನಡೆಸಿದ ಬಳಿಕ, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಸಂತೋಷ್ ರಾವ್ ಎಂಬಾತನನ್ನು ಬಂಧಿಸಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಂತೋಷ್ ರಾವ್ ಅವರನ್ನು ನಿರ್ದೋಷಿ ಎಂದು ತೀರ್ಪು ನೀಡಿತ್ತು.ಈ ವೇಳೆ ನ್ಯಾಯಾಲಯ ತನಿಖಾ ಸಂಸ್ಥೆಗಳ ಕಾರ್ಯವೈಖರಿಯ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿ, ನಿಜವಾದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿದೆ ಎಂದು ಹೇಳಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಎಲ್ಲಾ ಅಂಶಗಳನ್ನು ಪರಿಗಣಿಸಿ ಸಿಬಿಐಗೆ ತನಿಖಾ ವರದಿ ಸಲ್ಲಿಸಲು ಸೂಚಿಸಿದೆ. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ.ಈ ಬೆಳವಣಿಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗುವ ಸಾಧ್ಯತೆಯನ್ನು ಮತ್ತೆ ಜೀವಂತಗೊಳಿಸಿದ್ದು, ಮುಂದಿನ ಕ್ರಮಗಳತ್ತ ಸಾರ್ವಜನಿಕರ ಗಮನ ಹರಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...