Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಮನೂರು ಕುಟುಂಬಕ್ಕೆ ದೊಡ್ಡ ಸವಾಲು : 23 ಮಂದಿ ಮುಸ್ಲಿಂರಿಂದ ನಾಮಪತ್ರ ಸಲ್ಲಿಕೆ

---Advertisement---

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಕುಟುಂಬದ ಕುಡಿ ಅಂದ್ರೆ ಮೊಮ್ಮಗ ಸಮರ್ಥ್ ಅಧಿಕೃತವಾಗಿ ರಾಜಕೀಯ ಕಣಕ್ಕೆ ಇಳಿದಿದ್ದಾರೆ. ತಾತನಿಂದ ತೆರವಾದ ಸ್ಥಾನಕ್ಕೆ ಚುನಾವಣೆಗೆ ನಿಂತಿದ್ದಾರೆ. ಸಮರ್ಥ್ ಗೆ ಬಿಜೆಪಿ ಅಭ್ಯರ್ಥಿಯನ್ನು ಮಾತ್ರ ಸೋಲಿಸುವ ಸವಾಲಿಲ್ಲ. ಬದಲಿಗೆ ಬೇರೆ ಬೇರೆ ಅಭ್ಯರ್ಥಿಗಳು ಸವಾಲೊಡ್ಡಿದ್ದಾರೆ. ಈಗಾಗಲೇ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೂ ಸೇರಿದಂತೆ ಒಟ್ಟು 38 ಮಂದು ನಾಮ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ 23 ಮಂದಿ ಮುಸ್ಲಿಮರೇ ಇದ್ದಾರೆ ಅನ್ನೋದು ಆಶ್ಚರ್ಯಕರ ಸಂಗತಿ.

ಯಾಕಂದ್ರೆ ದಾವಣಗೆರೆ ಕ್ಷೇತ್ರದಲ್ಲಿ ಮುಸಲ್ಮಾನ ಸಮುದಾಯ ಕೂಡ ಹೆಚ್ಚಿನ ಸಂಖ್ಯೆಯಲ್ಲಿದೆ. ಈ ಬಾರಿ ಕಾಂಗ್ರೆಸ್ ನಿಂದ ತಮಗೆ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆ ಕೂಡ ಜಾಸ್ತಿ ಇತ್ತು. ಆದರೆ ಅದು ನಿರಾಸೆಯಾಗಿತ್ತು. ಇದೀಗ ಮುಸ್ಲಿಂ ಸಮುದಾಯದ ನಾಯಕರು ಬಂಡಾಯವೆದ್ದಿದ್ದಾರೆ. ಅದರಲ್ಲೂ ಸಾದಿಕ್ ಪೈಲ್ವಾನ್ ನಾವೂ ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವ ಉದಾಹರಣೆಗಳೇ ಹೆಚ್ಚಾಗಿವೆ. ಹೀಗಿರುವಾಗ ಬಾಗಲಕೋಟೆ ಹಾಗೂ ದಾವಣಗೆರೆಯನ್ನೂ ಈ ಬಾರಿ ಗೆಲ್ಲುವ ನಿರೀಕ್ಷೆಯೂ ಇದೆ. ಆದರೂ ಎದುರಾಳಿಗಳನ್ನ ನಿರ್ಲಕ್ಷ್ಯ ಮಾಡುವಂತಿಲ್ಲ‌. ಆ ಕಾರಣಕ್ಕಾಗಿಯೇ ಕಾಂಗ್ರೆಸ್ ನಾಯಕರು, ಸಚಿವ ಜಮೀರ್ ಅಹ್ಮದ್ ಅವರಿಗೆ ಸೂಚನೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮತಯಾಚನೆ ಮಾಡಿ, ಅಲ್ಪಸಂಖ್ಯಾತರ ಕೋಪವನ್ನು ಶಮನ ಮಾಡಿ, ದಾವಣಗೆರೆಯನ್ನು ಗೆಲ್ಲಿಸಿಕೊಂಡು ಬರಲೇಬೇಕೆಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಅಲ್ಪಸಂಖ್ಯಾತರ ಬಳಿ ಮಾತನ್ನಾಡುತ್ತೇನೆ ಎಂದಿದ್ದಾರೆ. ಇದರ ನಡುವೆ ನಿನ್ನೆಯೆಲ್ಲಾ ದಾವಣಗೆರೆ ಕ್ಷೇತ್ರದಲ್ಲಿ ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ದೊಡ್ಡ ಮಟ್ಟದಲ್ಲಿಯೇ ಸಮರ್ಥ್ ಪರವಾಗಿ ಪ್ರಚಾರ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...