Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ | ಮಾ.27 ರಂದು ಮಿನಿ ಉದ್ಯೋಗ ಮೇಳ

---Advertisement---

ಸುದ್ದಿಒನ್, ಬಳ್ಳಾರಿ,ಮಾ.24 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಜೀಟಾ, ಪಿಟ್ಟಿ (ಇಂಡಸ್ಟ್ರೀಸ್ ಪ್ರೈ.ಲಿ.), ಟೊಯೋಟಾ, ಫಾಕ್ಸ್ಕಾನ್, ಶ್ರೀ ವರ್ಧನ್ ಎಫ್‌ಎಂಸಿಜಿ ಮತ್ತು ಶ್ರೀರಾಮ್ ಫೈನಾನ್ಸ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.  ಸಂದರ್ಶನದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಎಂಜಿನಿಯರಿಂಗ್ ಪದವಿ ಹೊಂದಿರಬೇಕು.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿಗಳೊಂದಿಗೆ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...