Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಾವುದೇ ಕಾರಣಕ್ಕೂ ನಾಮಪತ್ರ ವಾಪಾಸ್ ತೆಗೆದುಕೊಳ್ಳಲ್ಲ : ಸಾಧಿಕ್ ಪೈಲ್ವಾನ್

---Advertisement---

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೀತಾ ಇದೆ. ಆದರೆ ಕಾಂಗ್ರೆಸ್ ಗೆ ಅಲ್ಪಸಂಖ್ಯಾತರನ್ನ ಸಮಾಧಾನ ಮಾಡುವುದೇ ದೊಡ್ಡ ತಲೆ ನೋವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಸಾಧಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿಯೇ ಇದ್ದು, ಈಗ ಬಂಡಾಯ ಅಭ್ಯರ್ಥಿಯಾಗಿದ್ದಾರೆ. ಇವರನ್ನ ಸಮಾಧಾನ ಮಾಡುವುದೇ ಕಾಂಗ್ರೆಸ್ ಗೆ ದೊಡ್ಡ ಸವಾಲಾಗಿದೆ.

ಸಾಧಿಕ್ ಪೈಲ್ವಾನ್ ಅವರು ಕೂಡ ಯಾವುದೇ ಕಾರಣಕ್ಕೂ ನಾಮಪತ್ರ ವಾಪಾಸ್ ತೆಗೆದುಕೊಳ್ಳುವುದಿಲ್ಲ ಎಂಬ ಮಾತನ್ನ ಹೇಳಿದ್ದಾರೆ. ಅಹಿಂದ ಸಮುದಾಯದ ಬೆಂಬಲದಿಂದ ಈ ಬಾರಿ ಚುನಾವಣೆಯ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು ನಾನಿಲ್ಲ. ಅವರ ಆಶೀರ್ವಾದ ನನ್ನ ಮೇಲೆ ಇದೆ. ಕಾಂಗ್ರೆಸ್ ಮುಖಂಡರು ನಮ್ಮ ಅಹಿಂದ ಸಮುದಾಯಕ್ಕೆ ಟಿಕೆಟ್ ನೀಡದೆ ಅನ್ಯಾಯ ಮಾಡಿದ್ದಾರೆ ಎಂದು ವಿಡಿಯೋ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾದ ಕ್ಷೇತ್ರಕ್ಕೆ ಬಾರೀ ಡಿಮ್ಯಾಂಡ್ ಸೃಷ್ಟಿಯಾಗಿತ್ತು. ಶಾಮನೂರು ಶಿವಶಂಕರಪ್ಪ ಅವರು ಬದುಕಿದ್ದಾಗಲೇ ಮುಂದಿನ ಚುನಾವಣೆಗೆ ಅಲ್ಪಸಂಖ್ಯಾತರನ್ನೇ ಬೆಂಬಲಿಸ್ತೀನಿ, ಅವರಿಗೆ ಟಿಕೆಟ್ ಕೊಡಿಸುತ್ತೇವೆ ಎಂಬ ಮಾತನ್ನ ಹೇಳಿದ್ದರಂತೆ. ಈ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರು ತಿಳಿಸಿದ್ದರು. ಆದರೆ ಉಪಚುನಾವಣೆಯಲ್ಲಿ ಕುಟುಂಬಸ್ಥರಿಗೆ ಟಿಕೆಟ್ ಕೊಡುವ ಪದ್ಧತಿ ಇದೆ ಎಂದು ಕಾಂಗ್ರೆಸ್ ಎರಡು ಕಡೆ ಕುಟುಂಬಸ್ಥರಿಗೆ ಟಿಕೆಟ್ ನೀಡಿದೆ. ಹೀಗಾಗಿ ದಾವಣಗೆರೆಯಲ್ಲಿ ರೊಚ್ಚಿಗೆದ್ದಿರುವ ಮುಸ್ಲಿಮರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅದು ಒಬ್ಬಿಬ್ಬರಲ್ಲ ಬರೋಬ್ಬರಿ 23 ಜನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈಗ ಸಿದ್ದರಾಮಯ್ಯ ಅವರು ಹೇಗೆ ಬಂಡಾಯ ಶಮನ ಮಾಡ್ತಾರೆ ಅನ್ನೋದನ್ನ ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...