Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನಸಭೆಯಲ್ಲಿ  ಹಬ್ಬದ ದಿನವೂ ನಾನು ಮಾಂಸಾಹಾರ ಸೇವನೆ ಮಾಡುತ್ತೇನೆ ಅದು ತಪ್ಪಲ್ಲ ಎಂದ ಸಿದ್ದರಾಮಯ್ಯ 

---Advertisement---

ಬೆಂಗಳೂರು : ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಧಾರ್ಮಿಕ ನಂಬಿಕೆ, ಆಚರಣೆ ಹಾಗೂ ಆಹಾರ ಪದ್ಧತಿಯ ಕುರಿತು ಮುಕ್ತವಾಗಿ ಹಾಗೂ ಸುದೀರ್ಘವಾಗಿ ಮಾತನಾಡಿ ಚರ್ಚೆಗೆ ಕಾರಣರಾಗಿದ್ದಾರೆ. ಹಬ್ಬಗಳ ಸಂದರ್ಭದಲ್ಲೂ ಮಾಂಸಾಹಾರ ಸೇವನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯುಗಾದಿ ಮತ್ತು ಶಿವರಾತ್ರಿಯಂತಹ ಹಬ್ಬಗಳ ದಿನಗಳಲ್ಲಿಯೂ ತಾವು ಮಾಂಸಾಹಾರ ಸೇವನೆ ಮಾಡಿರುವುದಾಗಿ ಹೇಳಿದ್ದಾರೆ. “ಎಲ್ಲ ದಿನಗಳೂ ಒಂದೇ. ಹಬ್ಬ ಎಂದು ನಾವು ಆಚರಿಸುತ್ತೇವೆ ಅಷ್ಟೇ. ಯಾರೇ ಆಗಿರಲಿ, ಅವರವರ ನಂಬಿಕೆ ಪ್ರಕಾರ ನಡೆದುಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.
ಇದರ ಜೊತೆಗೆ, ರಾಹುಕಾಲ ನೋಡಿಕೊಂಡು ಬಜೆಟ್ ಮಂಡನೆ ಮಾಡಿದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಎತ್ತಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, “ನಾನು ರಾಹುಕಾಲ, ಗುಳಿಗೆ ಕಾಲವನ್ನು ನಂಬುವುದಿಲ್ಲ. ಆದರೆ ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಪ್ರಾಯಕ್ಕೂ ಗೌರವ ನೀಡಬೇಕು. ಕೆಲವರು ಅಧಿಕಾರಿಗಳು ಮತ್ತು ಮನೆಯವರ ಮನವಿಯನ್ನು ಗೌರವಿಸಿ ಈ ಬಾರಿ ಹಾಗೆ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ. ಹಿಂದೆ ತಾವು ರಾಹುಕಾಲದಲ್ಲಿಯೇ ಬಜೆಟ್ ಮಂಡನೆ ಮಾಡಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.
ಈ ವೇಳೆ ವಿರೋಧ ಪಕ್ಷದ ಸದಸ್ಯರು ನಗೆ ವ್ಯಕ್ತಪಡಿಸಿದರೂ, ಸಿದ್ದರಾಮಯ್ಯ ತಮ್ಮ ನಿಲುವಿನಲ್ಲಿ ಸ್ಥಿರವಾಗಿದ್ದು, “ನಾನು ಯಾವುದೇ ಕಾಲ, ಸೂರ್ಯಗ್ರಹಣವನ್ನು ನಂಬುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಹಬ್ಬದ ದಿನಗಳಲ್ಲಿ ಮಾಂಸಾಹಾರ ಸೇವನೆ ಕುರಿತಾಗಿ ನಡೆದ ಚರ್ಚೆಯಲ್ಲಿ, ಕೆಲ ಸದಸ್ಯರು ತಮ್ಮದೇ ನಂಬಿಕೆಗಳನ್ನು ಉಲ್ಲೇಖಿಸಿದಾಗ, “ಅದು ಅವರವರ ನಂಬಿಕೆ” ಎಂದು ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದರು.ಸಿದ್ದರಾಮಯ್ಯ ಅವರ ಈ ಹೇಳಿಕೆಗಳು ವಿಧಾನಸಭೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಧಾರ್ಮಿಕ ನಂಬಿಕೆ ಹಾಗೂ ವೈಯಕ್ತಿಕ ಸ್ವಾತಂತ್ರ್ಯದ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now