Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಧಾರವಾಡದಲ್ಲಿ ನಡೆದ ಮಾಜಿ ಶಾಸಕನ ಪುತ್ರನ ಸಾವಿಗೆ ಟ್ವಿಸ್ಟ್..!

---Advertisement---

ಧಾರವಾಡ: ತಾಲೂಕಿನ ರಾಮಾಪುರ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿತ್ತು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ ಅವರ ಶವ ಪತ್ತೆಯಾಗಿತ್ತು. ಮೃತ ರಾಜು ಬೋಳಶೆಟ್ಟಿ ಅವರಿಗೆ 53 ವರ್ಷ ವಯಸ್ಸಾಗಿತ್ತು. ಈ ಶವ ರಾಮಾಪುರ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿತ್ತು. ಇದೀಗ ಈ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

 

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಕೊಲೆ ರಾಜ್ಯಾದ್ಯಂತ ಸಂಚಲನ ಸೃಷ್ಟಿ ಮಾಡಿತ್ತು. ಇದು ಪೂರ್ವನಿಯೋಜಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಂಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರಾಜು ಬೋಳಶೆಟ್ಟಿ, ದೈಹಿಕ ಸಂಪರ್ಕಕ್ಕೆ ಬಂದಾಗ ಆಕೆಗೆ ಹಣ ನೀಡುತ್ತಿದ್ದ.

 

ಸಾಲದ ರೂಪದಲ್ಲಿಯೇ ಮಹಿಳೆಗೆ ಹಣ ನೀಡುತ್ತದ್ದ ರಾಜು, 2 ಲಕ್ಷ ರೂ. ಗೂ ಹೆಚ್ಚು ಹಣ ಕೊಟ್ಟಿದ್ದ. ಇದೇ ವಿಚಾರಕ್ಕೆ ಮಹಿಳೆ ಹಾಗೂ ರಾಜು ನಡುವೆ ಮನಸ್ತಾಪ ಆಗಿತ್ತು. ನಿನ್ನೆಯೂ ಆತ ದೈಹಿಕ ಸಂಪರ್ಕಕ್ಕಾಗಿ ಹೊಲಕ್ಕೆ ಮಹಿಳೆಯನ್ನು ಕರೆದಿದ್ದ. ಇದೇ ವೇಳೆ ಮಹಿಳೆ, ಆಕೆಯ ಮಗ ಹಾಗೂ ಆಕೆಯ ಪ್ರಿಯಕರ ಸೇರಿ ಈ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ. ರಾಜು ಬೋಳಶೆಟ್ಟಿಯ ಕಾರಿನಲ್ಲೇ ರಾಮಾಪುರ ಅರಣ್ಯಕ್ಕೆ ಆತನ ಶವವನ್ನು ತಂದ ಈ ಮೂವರು, ಹಿಂದಿನ ಸೀಟಿನಲ್ಲಿ ಶವವಿಟ್ಟು, ತಾವು ತಂದಿದ್ದ 10 ಲೀ. ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...