Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧಾರವಾಡದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ: ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

---Advertisement---

ಧಾರವಾಡ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕರ ಪುತ್ರ ರಾಜು ಬೋಳಶೆಟ್ಟಿ ಅವರ ಶವ ಧಾರವಾಡ ಸಮೀಪ ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಜ್ಯದ ಗಮನ ಸೆಳೆದಿದೆ. ಮೇಲ್ನೋಟಕ್ಕೆ ಇದು ಹತ್ಯೆ ಪ್ರಕರಣವಾಗಿರುವುದು ಸ್ಪಷ್ಟವಾಗಿದ್ದು, ಪೊಲೀಸರ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ.

ಪೊಲೀಸ್ ಮೂಲಗಳ ಪ್ರಕಾರ, ಈ ಹತ್ಯೆಯ ಹಿಂದೆ ಅಕ್ರಮ ಸಂಬಂಧದ ಕೋಣೆಯೂ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರರಾದ ರಾಜು ಬೋಳಶೆಟ್ಟಿ (53) ಅವರ ಹತ್ಯೆಗೆ ಮಹಿಳೆ ಮತ್ತು ಗ್ಯಾಂಗ್‌ನ ಕೈವಾಡವಿರುವ ಸಾಧ್ಯತೆಗಳನ್ನೂ ತನಿಖೆ ಸೂಚಿಸುತ್ತಿದೆ.
ಘಟನೆಯ ಪ್ರಕಾರ, ಆರೋಪಿಗಳು ಬೇರೆಡೆ ಹತ್ಯೆ ನಡೆಸಿ ನಂತರ ಶವವನ್ನು ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಕಾರಿನಲ್ಲೇ ಸುಟ್ಟು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಪೆಟ್ರೋಲ್ ಖರೀದಿ ಪ್ರಮುಖ ಸುಳಿವಾಗಿ ಪರಿಣಮಿಸಿದ್ದು, ಸ್ಥಳೀಯ ಪೆಟ್ರೋಲ್ ಬಂಕ್‌ನ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಮಹತ್ವದ ಮಾಹಿತಿಯನ್ನು ನೀಡಿವೆ.

ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ, ಆರೋಪಿಗಳು ಎರಡು ಕಾರುಗಳಲ್ಲಿ ಸ್ಥಳಕ್ಕೆ ತೆರಳಿರುವುದು ಬಹಿರಂಗವಾಗಿದೆ. ಒಂದು ಕಾರಿನಲ್ಲಿ ಶವವನ್ನು ಸುಟ್ಟು, ಮತ್ತೊಂದು ಕಾರಿನಲ್ಲಿ ವಾಪಸ್‌ ಬಂದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.ತ್ವರಿತ ಕಾರ್ಯಾಚರಣೆ ನಡೆಸಿದ ಧಾರವಾಡ ಗ್ರಾಮೀಣ ಪೊಲೀಸರು ಘಟನೆ ನಡೆದ 24 ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿ ಜೈಲಿಗೆ ಕಳುಹಿಸಿದ್ದಾರೆ. ಪ್ರಕರಣದ ಹಿನ್ನಲೆ ಮತ್ತು ನಿಖರ ಕಾರಣಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...