Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳಾ ರಾಷ್ಟ್ರೀಯ ಹ್ಯಾಂಡ್‍ಬಾಲ್ ಪಂದ್ಯಾವಳಿ : ಚಿತ್ರದುರ್ಗದ ನಾಲ್ವರು ಮಹಿಳಾ ಕ್ರೀಡಾ ಪಟುಗಳು ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮಾ. 26 : ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆಯಲಿರುವ ಸೀನಿಯರ್ ಮಹಿಳಾ ರಾಷ್ಟ್ರೀಯ ಹ್ಯಾಂಡ್‍ಬಾಲ್ ಪಂದ್ಯಾವಳಿಗೆ ಚಿತ್ರದುರ್ಗದಿಂದ ನಾಲ್ಕು ಜನ ಮಹಿಳಾ ಕ್ರೀಡಾ ಪಟುಗಳು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಕೆ.ಹೆಚ್.ಶಿವರಾಂ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಮಾ.30ರಿಂದ ಏ3ರವರೆಗೆ ಸೀನಿಯರ್ ಮಹಿಳಾ ರಾಷ್ಟ್ರೀಯ ಹ್ಯಾಂಡ್‍ಬಾಲ್ ಪಂದ್ಯಾವಳಿ ನಡೆಯಲಿದ್ದು, ಇದರಲ್ಲಿ ಚಿತ್ರದುರ್ಗ ಜಿಲ್ಲೆಯ ಮಹಿಳಾ ಕ್ರೀಡಾಪಟುಗಳಾದ ಸಾನಿಯಾ, ಎಸ್.ಪೂಜಾ, ಪಿ.ಬಿಂದುಶ್ರೀ ಹಾಗೂ ಎನ್.ಟಿ.ಉಷಾ ರವರು ಆಯ್ಕೆಯಾಗಿದ್ದು, ಮಾ.15 ರಿಂದ 26ರವರೆಗೆ ಹಾಸನ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದು, ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಾ.27 ರಂದು ಪ್ರಯಾಣ ಬೆಳಸಲಿದ್ದಾರೆ ಎಂದಿದ್ದಾರೆ.

 

ಈ ಪಂದ್ಯಾವಳಿಯಲ್ಲಿ ಭಾಗವಹಿಸಿ ಹೆಚ್ಚಿನ ಸಾಧನೆಯನ್ನು ಮಾಡಿ ಜಿಲ್ಲೆಗೆ ರಾಜ್ಯಕ್ಕೆ ಕೀರ್ತಿಯನ್ನು ತರುವಂತೆ ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಸಂಸ್ಥೆಯ ಎಂ.ಹೆಚ್.ಜಯ್ಯಣ್ಣ, ಲೋಹಿತಾಕ್ಷಿ, ಹಿರಿಯ ಕ್ರೀಡಾಪಟುಗಳಾದ ಸೂರಜ್ ಕಾರ್ಯದರ್ಶಿ ಎನ್.ಡಿ.ಗೌಡ ಸಿ.ಎ.ಪ್ರಮೇನಾಥ್ ಶುಭ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...