ಸುದ್ದಿಒನ್, ಚಿತ್ರದುರ್ಗ. ಮಾರ್ಚ್ 27: ಮಹಾವೀರ ಜಯಂತಿ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.
ಪೂರ್ವ ನಿಗದಿತ ವೇಳಾಪಟ್ಟಿಯಂತೆ 2026ರ ಮಾರ್ಚ್ 30ರ ಸೋಮವಾರದಂದು ತೃತೀಯ ಭಾಷೆ ಪರೀಕ್ಷೆ ನಡೆಯಬೇಕಿತ್ತು. ಆದರೆ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 07 ಹೆಚ್‍ಹೆಚ್‍ಎಲ್ 2026ರ ಅನ್ವಯ, ಈ ಹಿಂದೆ ಮಾರ್ಚ್ 31ಕ್ಕೆ ನಿಗದಿಯಾಗಿದ್ದ ಮಹಾವೀರ ಜಯಂತಿ ರಜೆಯನ್ನು ಮಾರ್ಚ್ 30ರ ಸೋಮವಾರಕ್ಕೆ ಬದಲಾವಣೆ ಮಾಡಲಾಗಿದೆ. ಈ ಕಾರಣದಿಂದಾಗಿ ಸೋಮವಾರ ನಡೆಯಬೇಕಿದ್ದ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 31ರ ಮಂಗಳವಾರದಂದು ನಿಗಧಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯಗಳ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯಲಿವೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















