Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತ ಜನಗಣತಿ-2027 | ಏಪ್ರಿಲ್ 1 ರಿಂದ ಸ್ವಯಂ ಗಣತಿ ಪ್ರಕ್ರಿಯೆ ಆರಂಭ : ಸಹಕರಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ

---Advertisement---

ಚಿತ್ರದುರ್ಗ. ಮಾರ್ಚ್. 27: ಭಾರತ ಜನಗಣತಿ-2027ರ ಅಂಗವಾಗಿ ಸಾರ್ವಜನಿಕರು ತಾವಾಗಿಯೇ ಮಾಹಿತಿ ನೀಡುವ “ಸ್ವಯಂ ಗಣತಿ” ಪ್ರಕ್ರಿಯೆಯು 2026ರ ಏಪ್ರಿಲ್ 1 ರಿಂದ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

 

ಸಾರ್ವಜನಿಕರು 2026ರ ಏಪ್ರಿಲ್ 01 ರಿಂದ 15 ರವರೆಗೆ ಇಲಾಖೆಯ ವೆಬ್‍ಸೈಟ್  www.se.census.gov.in  ಗೆ ಭೇಟಿ ನೀಡಿ ತಮ್ಮ ಕುಟುಂಬದ ವಿವರಗಳನ್ನು ಆನ್‍ಲೈನ್ ಪೋರ್ಟಲ್ ಮೂಲಕ ಭರ್ತಿ ಮಾಡಬಹುದು. ಮಾಹಿತಿ ಸಲ್ಲಿಸಿದ ನಂತರ ಲಭ್ಯವಾಗುವ ರೆಫರೆನ್ಸ್ ಐಡಿ  (Reference ID) ಅನ್ನು ಸಾರ್ವಜನಿಕರು ಸುರಕ್ಷಿತವಾಗಿಟ್ಟುಕೊಳ್ಳಬೇಕು.
ಬಳಿಕ 2026ರ ಏಪ್ರಿಲ್ 16 ರಿಂದ ಮೇ 15 ರವರೆಗೆ ನಿಗದಿಪಡಿಸಲಾದ ಕ್ಷೇತ್ರ ಮಾಹಿತಿಗಳ ಸಂಗ್ರಹಣೆಯ ಸಮಯದಲ್ಲಿ, ಮೌಲ್ಯೀಕರಣಕ್ಕಾಗಿ ಗಣತಿದಾರರು ಮನೆಗಳಿಗೆ ಭೇಟಿ ನೀಡಿದಾಗ ಈ ರೆಫರೆನ್ಸ್ ಐಡಿ ಅನ್ನು ನೀಡಿ ಗಣತಿ ಕಾರ್ಯದಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now