Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಸಂಭ್ರಮದ ರಾಮನವಮಿ ; ವಿಶೇಷ ಪೂಜೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ನಗರದ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ಶ್ರೀರಾಮನವಮಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೆಳಗೋಟೆಯಲ್ಲಿರುವ ಅಂಬಾಭವಾನಿ ದೇವಸ್ಥಾನದ ಆವರಣದಲ್ಲಿರುವ ಶ್ರೀರಾಮನ ದೇವಾಲಯದಲ್ಲಿ ರಾಮ, ಸೀತೆ, ಲಕ್ಷ್ಮಣ, ಆಂಜನೇಯನಿಗೆ ಮಲ್ಲಿಗೆ, ಸುಗಂಧರಾಜ, ಕನಕಾಂಬರ, ಸೇವಂತಿಗೆ ಸೇರಿದಂತೆ ವಿವಿಧ ಬಗೆಯ ಹೂವುಗಳಿಂದ ಸಿಂಗರಿಸಿ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಲಾಯಿತು. ಬೆಳಗಿನಿಂದ ಮಧ್ಯಾಹ್ನದವರೆಗೆ ನೂರಾರು ಭಕ್ತರು ಧಾವಿಸಿ ಶ್ರೀರಾಮನ ದರ್ಶನ ಪಡೆದರು.

 

ಮರಾಠ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗೋಪಾಲ್‍ರಾವ್ ಜಾಧವ್, ಉಷಬಾಯಿ, ವಿದ್ಯಾನಂದಲಾಡ್, ಸುಚಿತ್ರಲಾಡ್, ಮಂಜುನಾಥ ಗಾಯಕ್‍ವಾಡ್, ಕೃಷ್ಣೋಜಿರಾವ್ ಮೋರೆ, ಚಂದ್ರೋಜಿರಾವ್, ಗುರುರಾಜ ಫರ್ನಿಚರ್ಸ್ ಮಾಲೀಕರಾದ ಕಾಶಿವಿಶ್ವನಾಥಶೆಟ್ಟಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರು ಸೇರಿದಂತೆ ಇನ್ನು ಅನೇಕರು ಶ್ರೀರಾಮನವಮಿಯಲ್ಲಿ ಪಾಲ್ಗೊಂಡಿದ್ದರು. ಎಲ್ಲಾ ದೇವಸ್ಥಾನಗಳಲ್ಲಿ ಭಕ್ತರಿಗೆ ಕೋಸಂಬರಿ ಪಾನಕ ವಿತರಿಸಲಾಯಿತು. ಸ್ಟೇಡಿಯಂ ರಸ್ತೆ, ರಂಗಯ್ಯನಬಾಗಿಲು, ಆನೆಬಾಗಿಲು ಹಾಗೂ ಬುರುಜನಹಟ್ಟಿಯಲ್ಲಿರುವ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹಾಗೂ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now