Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳಾ ದಿನಾಚರಣೆ: ಸಮಾನತೆ, ಸ್ವಾವಲಂಬನೆ ಮತ್ತು ಜಾಗೃತಿಗೆ ಕರೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಎಲ್ಲಾ ರಂಗದಲ್ಲಿಯೂ ಮಹಿಳೆ ಪುರುಷರಿಗೆ ಸಮಾನವಾಗಿ ದುಡಿಯುತ್ತಿದ್ದು, ಸಾಧನೆಗಳನ್ನು ಗುರುತಿಸಿ ಸಮಾನ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ದೇಶ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಶಿವಣ್ಣ ತಿಳಿಸಿದರು.

 

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ ಐಕ್ಯುಎಸಿ. ಸಹಯೋಗದೊಂದಿಗೆ ಶುಕ್ರವಾರ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹನ್ನೆರಡನೆ ಶತಮಾನದಲ್ಲಿಯೇ ಬಸವಣ್ಣನವರು ಮಹಿಳೆಯರಿಗೆ ಸಮಾನತೆ ಕಲ್ಪಿಸಿದ್ದರಿಂದ ಅನೇಕ ವಚನಗಾರ್ತಿಯರು ಅನುಭವ ಮಂಟಪ ಪ್ರವೇಶಿಸಿದರು. 21 ನೇ ಶತಮಾನದಲ್ಲಿ ಹೆಣ್ಣು ಮಕ್ಕಳು ಎಲ್ಲಾ ರಂಗಗಳಲ್ಲಿಯೂ ಮುಂಚೂಣಿಯಲ್ಲಿದ್ದಾರೆ. ಹಾಗಾಗಿ ವಿದ್ಯಾರ್ಥಿನಿಯರು ಸಾಧನೆಯತ್ತ ಗಮನಹರಿಸಬೇಕೆಂದು ಕರೆ ನೀಡಿದರು.
ಮುಟ್ಟಿನ ನೈರ್ಮಲ್ಯ ಕಾಪಾಡುವುದಕ್ಕಾಗಿ ಪ್ಯಾಡ್, ಬರ್ನಿಂಗ್ ಮಿಷನ್‍ನ್ನು ಕಾಲೇಜಿನಲ್ಲಿ ಅಳವಡಿಸಿದ್ದು, ತುರ್ತು ಸಂದರ್ಭದಲ್ಲಿ ಪಿಂಕ್ ಬಾಕ್ಸ್‍ನಲ್ಲಿರುವ ಪ್ಯಾಡ್‍ಗಳನ್ನು ಬಳಸಿಕೊಂಡು ಇದರ ಉಪಯೋಗ ಪಡೆದುಕೊಳ್ಳುವಂತೆ ಹೇಳಿದರು.

 

ಎಸ್.ಜೆ.ಎಂ.ಕಾನೂನು ಕಾಲೇಜಿನ ಸಹ ಪ್ರಾಧ್ಯಾಪಕಿ ಸುಮನಾ ಅಂಗಡಿ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡುತ್ತ ಸಮಾಜದಲ್ಲಿ ನಡೆಯುತ್ತಿರುವ ಅಪರಾಧದ ಜಾಲಗಳು ಹಾಗೂ ಸೈಬರ್ ಕ್ರೈಂಗಳ ಬಗ್ಗೆ ಜಾಗರೂಕರಾಗಿದ್ದುಕೊಂಡು ತಮ್ಮನ್ನು ತಾವೆ ರಕ್ಷಿಸಿಕೊಳ್ಳಬೇಕೆಂದರು.
ಕಾರ್ಯಕ್ರಮದ ಸಂಚಾಲಕಿ ಡಾ.ವಿಜಯಲಕ್ಷ್ಮಿ ಮಾತನಾಡುತ್ತ ಯಾವುದೇ ರಾಷ್ಟ್ರ ಅಭಿವೃದ್ದಿ ಹೊಂದಬೇಕಾದರೆ ಮೊದಲು ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾಗಬೇಕು. ಸದೃಢ ಸಮಾಜ ನಿರ್ಮಾಣಕ್ಕಾಗಿ ಲಿಂಗ ಸಮಾನತೆ ಮತ್ತು ಶಿಕ್ಷಣ ಹೆಣ್ಣಿಗೆ ಅತ್ಯವಶ್ಯಕ ಎಂದು ತಿಳಿಸಿದರು.

 

ಇಂಗ್ಲಿಷ್ ವಿಭಾಗದ ಡಾ.ಮಧುಸೂದನ ಪಿ.ಎನ್. ಕನ್ನಡ ವಿಭಾಗದ ಡಾ.ಗಾಯಿತ್ರಮ್ಮ, ಐ.ಕ್ಯು.ಎ.ಸಿ. ಸಂಚಾಲಕರಾದ ಹಲಸಂದಿ ಸತೀಶ್, ವಾಣಿಜ್ಯಶಾಸ್ತ್ರದ ಕನಕರಾಜು, ಗಿರೀಶ್ ಎಂ. ಗ್ರಂಥಪಾಲಕರಾದ ಕುಮಾರಸ್ವಾಮಿ ಬಿ.ಹೆಚ್. ಪತ್ರಾಂಕಿತ ವ್ಯವಸ್ಥಾಪಕರಾದ ವೆಂಕಟೇಶ್ ಆರ್. ನಂದಿನಿ ಟಿ. ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now