Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಣ ದುರ್ಬಳಕೆ ಆರೋಪ : ಹಾಲು ಉತ್ಪಾದಕರ ಸಂಘದ ಮಹಿಳಾ ಕಾರ್ಯದರ್ಶಿ ವಿಡಿಯೋ ಮಾಡಿ ಸೂಸೈಡ್

---Advertisement---

ಚಿಕ್ಕಮಗಳೂರು : ಹಣ ದುರ್ಬಳಕೆ ಆರೋಪ ಎದುರಿಸುತ್ತಿದ್ದ ಮಹಿಳೆಯೊಬ್ಬರು ಇಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಅದುವೆ ವಿಡಿಯೋ ಮಾಡಿಟ್ಟು ಸೂಸೈಡ್ ಮಾಡಿಕೊಂಡಿದ್ದಾರೆ. 45 ವರ್ಷದ ಉಷಾ ಆತ್ಮಹತ್ಯೆಗೆ ಶರಣಾದ‌ಮಹಿಳೆ. ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ ಕೇಳಿ ಬಂದ ಕಾರಣ ಮಹಿಳಾ ಸಂಘದ ಕಾರ್ಯದರ್ಶಿ ಆಗಿದ್ದ ಉಷಾ, ಸಾವಿಗೀಡಾಗಿದ್ದಾರೆ.

2010ರಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಆರಂಭವಾಗಿತ್ತು. ಅಲ್ಲಿಂದಲೂ ಉಷಾ ಅವರೇ ಸಂಘದ ಕಾರ್ಯದರ್ಶಿಯಾಗಿದ್ದರು. ಕಳೆದ ವರ್ಷ ಅಂದ್ರೆ 2025ರಲ್ಲಿ ಸಂಘಕ್ಕೆ ಹೊಸ ಸದಸ್ಯರು ಸೇರ್ಪಡೆಗೊಂಡರು. ಬಳಿಕ ಎಲ್ಲಾ ಲೆಕ್ಕಪತ್ರ ಕೇಳಲು ಹೊಸ ಸದಸ್ಯರು ಪ್ರಾರಂಭ ಮಾಡಿದ್ದರು. ಲೆಕ್ಕಪತ್ರ ಕಳೆದು ಹೋಗಿದೆ ಎಂಬ ಉತ್ತರವೇ ಬಂದಿತ್ತು. ಹೀಗಾಗಿಯೇ ಅವರ ವಿರುದ್ಧ ಹಣ ದುರ್ಬಳಕೆಯ ಆರೋಪ ಕೇಳಿ ಬಂದಿತ್ತು. ಇದರಿಂದ ನೊಂದ ಉಷಾ, ಈ ಕಿರುಕುಳವನ್ನ ನನ್ನಿಂದ ತಡೆಯಲು ಆಗುತ್ತಿಲ್ಲ. ಲೆಕ್ಕಪತ್ರ ಪುಸ್ತಕ ಕಳೆದು ಹೋಗಿರುವುದು ನನ್ನಿಂದಾದ ತಪ್ಪು ಅಂತ ಹೇಳಿ, ವಿಡಿಯೋ ಮಾಡಿಟ್ಟು ನೇಣಿಗೆ ಶರಣಾಗಿದ್ದಾರೆ.

ಈ ಸಂಬಂಧ ಮೃತ ಉಷಾ ಪತಿ ಪೊಲೀಸರಿಗೆ ಒಂದಷ್ಟು ಜನರ ಮೇಲೆ ದೂರು ನೀಡಿದ್ದಾರೆ. ನನ್ನ ಹೆಂಡತಿ ಸಾವಿಗೆ ಕೆಲವರ ಕಿರುಕುಳವೇ ಕಾರಣ ಎಂದು ದೂರಿದ್ದಾರೆ. ಆಕೆ ಎಲ್ಲಾ ಲೆಕ್ಕಪತ್ರ ನೀಡಿದ್ದರು, ಕಿರುಕುಳ ನೀಡುತ್ತಿದ್ದರು. ಕುಟುಂಬಕ್ಕೂ ಜೀವ ಬೆದರಿಕೆ ಇತ್ತು ಎಂದು ಆರೋಪಿಸಿದ್ದಾರೆ. ತನ್ನ ಪತ್ನಿ ಸಾವಿಗೆ ಕಾರಣರಾದವರು ಯಾರೆಂದು ವಿಡಿಯೋದಲ್ಲಿಯೇ ಹೇಳಿದ್ದಾಳೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now