Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುವಕರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಲಿ : ತೋಟಪ್ಪ ಉತ್ತಂಗಿ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 : ರಂಗ ಕಲೆ, ಸಂಗೀತ ಮುಂತಾದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಯುವಕರು ಕಲಿಯುವದರ ಮೂಲಕ ಜೀವಂತವಾಗಿ ಇರಿಸಿಕೊಳ್ಳಬೇಕು. ಸಂಸ್ಕೃತಿ ಮತ್ತು ಸಾಂಸ್ಕೃತಿಕ ಲೋಕ ನಮ್ಮದಾದಾಗ ಅತ್ಯಂತ ಚಟುವಟಿಕೆಯಿಂದ ಇರಲು ಸಾಧ್ಯ ಎಂದು ಸಂಗೀತ ಶಿಕ್ಷಕರಾದ ತೋಟಪ್ಪ ಉತ್ತಂಗಿ ಹೇಳಿದರು.

ನಗರದ ಬಿ ಸಿ ಎಂ ಹಾಸ್ಟಲ್ ಆರ್ಟ್ಸ್ ಕಾಲೇಜು ಹಿಂಭಾಗದಲ್ಲಿ ರಂಗಭಂಡಾರ ಕಲಾಸಂಘ ಮತ್ತು ಕನ್ನಡ ಸಂಸ್ಕೃತಿ ಸಹಯೋಗದಲ್ಲಿ ನಡೆದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಗೀತ ನಮ್ಮ ಗುರು ಪರಂಪರೆ. ಸಂಗೀತದ ಮೂಲಕ ಸಾಹಿತ್ಯ ಇತರ ಚಟುವಟಿಕೆಗಳು ಕಲಿಯಲು ಸಾಧ್ಯವಾಗುತ್ತದೆ. ಹಾಗಾಗಿ ಇಂದಿನ ಯುವಕರು ಮತ್ತು ಮಹಿಳೆಯರು, ಇವುಗಳ ಬಗ್ಗೆ ಆಸಕ್ತಿಯನ್ನು ಹೊಂದಿ ಅವುಗಳನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ನುಡಿದರು.

ನಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಜಯಕುಮಾರ್, ಕನ್ನಡ ಉಪನ್ಯಾಸಕರು ಮಾತನಾಡುತ್ತಾ, ಇಂದಿನ ಯುವಶಕ್ತಿಗೆ ಸಂಗೀತ ನೃತ್ಯ ನಾಟಕಗಳಂತಹ ಅವಶ್ಯಕತೆ ಇದ್ದು ಅವು ನಮ್ಮನ್ನ ಸಮಾಜದ ಉತ್ತಮ ವ್ಯಕ್ತಿಗಳನ್ನಾಗಿ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇವೆ‌‌. ಗಂಗೂಬಾಯಿ ಹಾನಗಲ್, ಮಲ್ಲಿಕಾರ್ಜುನ ಮನ್ಸೂರ್, ಪಂಡಿತ್ ವೆಂಕ್ಟೇಶ್ ಕುಮಾರ್ ಗವಾಯಿ, ಪುಟ್ಟರಾಜ ಗವಾಯಿಗಳು ಮುಂತಾದವರು ಈ ನಾಡಿಗೆ ಸಂಗೀತ ಕ್ಷೇತ್ರದಲ್ಲಿ ಅನೇಕ ಕೊಡುಗೆಗಳನ್ನು ಕೊಟ್ಟಿದ್ದಾರೆ ಅಂತಹ ನಿಟ್ಟಿನಲ್ಲಿ ನಿಮ್ಮ ಪ್ರಯತ್ನಗಳು ಇರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಶಿಕಲಾ, ಯೋಗ ಶಿಕ್ಷಕಿ ಮಂಜುಳಾ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಬಿ. ನಿರ್ಮಲ, ಸುಜಾತ ಉಪಸ್ಥಿತರಿದ್ದರು. ನಂತರ ಮಕ್ಕಳಿಂದ ಸಮೂಹ ಗಾಯನ ನೃತ್ಯ ಪ್ರದರ್ಶನ ಮಾಡಲಾಯಿತು. ಇದೇ ಸಂದರ್ಭದಲ್ಲಿ ತೋಟಪ್ಪ ಉತ್ತಂಗಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now