Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದಾವಣಗೆರೆಯಲ್ಲಿ ರಾಜಕೀಯ ಕಾವು: ಪ್ರದೀಪ್ ಈಶ್ವರ್ ಭೇಟಿ ವೇಳೆ ಆದದ್ದೇನು ? ನಂತರ ಅವರು ಹೇಳಿದ್ದೇನು

---Advertisement---

ದಾವಣಗೆರೆ : ಬಿಜೆಪಿ ನಾಯಕರ ಸವಾಲನ್ನು ಸ್ವೀಕರಿಸಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ದಾವಣಗೆರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜಕೀಯ ಉದ್ವಿಗ್ನತೆ ತಾರಕ್ಕೇರಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ ಹಾಗೂ ಪೊರಕೆ ತೋರಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಕೆಲಕಾಲ ಹೈಡ್ರಾಮ ಕಂಡುಬಂತು.

ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ದಿನ ನಗರಕ್ಕೆ ಬಂದಿದ್ದ ಪ್ರದೀಪ್ ಈಶ್ವರ್, “ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಬೇಡಿ” ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಯಾಗಿ ಸ್ಥಳೀಯ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿ, ದಾವಣಗೆರೆಗೆ ಬಂದು ಎದುರಿಸಲು ಸವಾಲು ಹಾಕಿದ್ದರು.
ಈ ಹಿನ್ನೆಲೆ ಶನಿವಾರ ದಾವಣಗೆರೆಗೆ ಆಗಮಿಸಿದ ಪ್ರದೀಪ್ ಈಶ್ವರ್, ಜಿಲ್ಲಾ ಕೆಬಿ ಬಡಾವಣೆಯ ಬಿಜೆಪಿ ಕಚೇರಿ ಮುಂದೆ ರ್ಯಾಲಿ ನಡೆಸಿದರು. ಕಾರಿನ ಮೇಲೇರಿ ಪಕ್ಷದ ಬಾವುಟ ಹಾರಿಸುತ್ತಾ ತನ್ನ ಶಕ್ತಿ ಪ್ರದರ್ಶಿಸಿದರು. ಇದರಿಂದ ಉಗ್ರಗೊಂಡ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೊರಕೆ ತೋರಿಸಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಉಭಯ ಪಕ್ಷದ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು.

ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದ್ದುದರಿಂದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, “ಬಿಜೆಪಿ ನಾಯಕರು ತಮ್ಮ ಕಾರ್ಯಕರ್ತರ ಮೂಲಕ ಸವಾಲು ಹಾಕಿಸಿದ್ದರು. ನಾನು ಅವರ ಕಚೇರಿ ಮುಂದೆ ಬಂದು ಉತ್ತರ ಕೊಟ್ಟಿದ್ದೇನೆ” ಎಂದು ಪ್ರತಿಕ್ರಿಯಿಸಿದರು. ಜೊತೆಗೆ ತಮ್ಮ ಮೇಲೆ ಮಾಡಲಾದ ಆರೋಪಗಳಿಗೆ ತಿರುಗೇಟು ನೀಡಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...