ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಮಾರ್ಚ್. 30 : ಜಿಲ್ಲಾಸ್ಪತ್ರೆ ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ, ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಮೊದಲನೇ ಬುಧವಾರ ಉಚಿತವಾಗಿ ಮಕ್ಕಳ ಹೃದಯ ತಪಾಸಣೆ ನಡೆಸಲಾಗುವುದು.
ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ರವರೆಗೆ ಮಕ್ಕಳ ಹೃದಯ ತಜ್ಞ ಡಾ.ಜಿ.ಎಸ್.ಅನಿಲ್ ಕುಮಾರ್ ತಪಾಸಣೆ ನಡೆಸುವರು. ಮಕ್ಕಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವ ಸೋಂಕು ಹಾಗೂ ಚರ್ಮ ಮತ್ತು ತುಟಿಗಳು ನೀಲಿ ಬಣ್ಣಕ್ಕೆ ತಿರುಗುವುದು, ಉಸಿರಾಟದಲ್ಲಿ ತೊಂದರೆ ಅಥವಾ ಏದುಸಿರು ಬಿಡುವುದು, ಅನಿಯಮಿತ ಹೃದಯ ಬಡಿತ, ಮರುಕಳಿಸುವ ಕೆಮ್ಮುನಂತಹ ಲಕ್ಷಣ ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಈ ಉಚಿತ ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್