Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಡಿಕೆಶಿ ಮತ್ತು ಸಿದ್ದರಾಮಯ್ಯ ಜೋಡೆತ್ತುಗಳಲ್ಲ, ಕುಂಟೆತ್ತುಗಳು : ಆರ್. ಅಶೋಕ್ ವ್ಯಂಗ್ಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಮಾ. 31 : ಈ ಸರ್ಕಾರ ದುರಾಡಳಿತ, ಭ್ರಷ್ಟಾಚಾರ, 60% ಕಮೀಷನ್‍ನಲ್ಲಿ ಮುಳುಗಿದೆ. ಈ ಸರ್ಕಾರದಿಂದ ಅಭಿವೃದ್ಧಿ ಮರೀಚಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ ಇವರು ಸಾಲದರಾಮಯ್ಯ ಆಗಿದ್ದಾರೆ. ಈ ಸರ್ಕಾರ 1 ಲಕ್ಷ 32 ಸಾವಿರ ಕೋಟಿ ಸಾಲದ ಮುಳುಗಿದೆ ಸಿದ್ದರಾಮಯ್ಯ ಒಬ್ಬನೇ 4 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದಾರೆ ಒಬ್ಬರ ತಲೆ ಮೇಲೆ 80 ಸಾವಿರ ಸಾಲದ ಹೊರೆ ಏರಿದೆ ಈ ಸರ್ಕಾರ ನಂಬಿ ಕುಳಿತರೆ ಅದೋಗತಿ ಆಗಲಿದೆ ಅನ್ನಭಾಗ್ಯದ್ದು 750 ಕೋಟಿ ಕೊಟ್ಟಿಲ್ಲ, ಸಿದ್ದರಾಮಯ್ಯ ಸಾಲಗಾರ ಆಗಿದ್ದಾನೆ ಸಿಎಂ ಸಿದ್ದರಾಮಯ್ಯ ವಿರುದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಶೋಕ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಅವರನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಮುಂದೆ ಗೆಲ್ಲಲ್ಲ, ಜನರು ಈ ಸರ್ಕಾರವನ್ನ ಕಿತ್ತೊಗೆಯುತ್ತಾರೆ. ಇವೆಲ್ಲವೂ ಚುನಾವಣೆಗೆ ಪ್ರತಿಬಿಂಬ ಆಗಲಿವೆ. ಇದನ್ನೆಲ್ಕಾ ಪರಿಗಣಿಸಿ ಜನರು ಬಿಜೆಪಿ ಬೆಂಬಲಿಸಿ ಮತ ಹಾಕ್ತಾರೆ ಎಂದ ಅವರು, ಬಿಜೆಪಿ ಕಳ್ಳೆತ್ತುಗಳಿಗೆ ವೋಟ್ ಹಾಕಬೇಡಿ ಎಂಬ ಸಿಎಂ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿ, ಡಿಕೆಶಿ, ಸಿದ್ದರಾಮಯ್ಯ ಜೋಡೆತ್ತುಗಳಲ್ಲ, ಕುಂಟೆತ್ತುಗಳು ಡಿಕೆಶಿ,ಸಿದ್ದರಾಮಯ್ಯ ಇಬ್ಬರು ಸಹ  ಒಬ್ಬರ ದಾರಿಗೆ ಮತ್ತೊಬ್ರು ಬರಲ್ಲ ಅಧಿಕಾರಕ್ಕಾಗಿ ಡಿಕೆಶಿ ಬಕಪಕ್ಷಿಯಂತೆ ಕಾಯುತ್ತಿದ್ದಾರೆ ಕುಂಟೆತ್ತುಗಳು ಬೇಡವೆಂದು ಜನ ತೀರ್ಮಾನಿಸಿದ್ದಾರೆ ಎಂದು ಭವಿಷ್ಯ ನುಡಿದರು.

ನಾವು ಅಧಿಕಾರದಲ್ಲಿದ್ದಾಗ ಹೆಚ್ಚು ಸಾಲ ಮಾಡದೇ ಅಭಿವೃದ್ಧಿಗೆ ಒತ್ತು ನೀಡಲಾಗಿತ್ತು ಆದರೆ  ಈ ಸರ್ಕಾರ ಮೂರು ವರ್ಷಗಳಿಂದ ಯಾವುದೇ ಅಭಿವೃದ್ಧಿ ಮಾಡಿಲ್ಲ ಏನೇನು ಉದ್ಘಾಟನೆ ಮಾಡ್ತಿದ್ದಾರೆ ಅವೆಲ್ಲವೂ ಬಿಜೆಪಿ ಅವಧಿಯವು ಎಂದು ತಿಳಿಸಿದ ಆಶೋಕ್,  ಕೇಂದ್ರ ಸರ್ಕಾರ ಜನರ ಮೇಲೆ ಬೆಲೆ ಏರಿಕೆ ಯುದ್ದ ಮಾಡ್ತಿದೆ ಎಂದ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್,ತುಪ್ಪದ ಬೆಲೆ ಜಿ.ಎಸ್.ಟಿ. ಕಡಿಮೆ ಮಾಡಿದೆ ಕೇಂದ್ರ ಕಡಿಮೆ ಮಾಡಿದ್ರೆ, ರಾಜ್ಯ ಸರ್ಕಾರ ಎಲ್ಲವನ್ನು ಜಾಸ್ತಿ ಮಾಡಿದೆ ಎರಡು ಉಪಚುನಾವಣೆ ಬಳಿಕ ಜನರ ಮೇಲೆ ಎಲ್ಲಾ ತೆರಿಗೆ ಹಾಕ್ತಾರೆ ಇನ್ಮುಂದೆ ರಾಜ್ಯ ಸರ್ಕಾರ ಮಾರಿಹಬ್ಬ ಶುರು ಮಾಡಲಿದೆ ಎಂದ ಅಶೋಕ್ ಜನರು ಕಾಂಗ್ರೆಸ್ ಸರ್ಕಾರಕ್ಕೆ ಈಗ ಬುದ್ದಿ ಕಲಿಸಬೇಕು ಎಂದು ನುಡಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...