Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಏಪ್ರಿಲ್ 03 ರಂದು ಅಬ್ಬಿನಹೊಳೆ ಶ್ರೀರಂಗನಾಥಸ್ವಾಮಿ ಬ್ರಹ್ಮರಥೋತ್ಸವ

---Advertisement---

ಚಿತ್ರದುರ್ಗ. ಮಾ.31: ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮರಥೋತ್ಸವವು ಏಪ್ರಿಲ್ 3ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಲಿದೆ.

 

ಸ್ವಸ್ತಿಶ್ರೀ ಪರಾಭವನಾಮ ಸಂವತ್ಸರದ ಚೈತ್ರ ಶುದ್ಧ ತದಿಗೆಯ ಶುಭ ಸಂದರ್ಭದಲ್ಲಿ, ಮಾರ್ಚ್ 21ರಿಂದ ಏಪ್ರಿಲ್ 7ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಈಗಾಗಲೇ ಮಾ. 21ರಂದು ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಗಿದೆ. ಮಾ. 31ರಂದು ಅಂಕುರಾರ್ಪಣ, ಕಳಸ ಸ್ಥಾಪನೆ ಹಾಗೂ ಹೋಮಾದಿ ಕಾರ್ಯಕ್ರಮಗಳು ನಡೆಯದಿವೆ. ಏಪ್ರಿಲ್ 1ರಂದು ರಾತ್ರಿ ಗರುಡೋತ್ಸವ ಹಾಗೂ ಕಲ್ಯಾಣೋತ್ಸವ ಸೇವೆಗಳು ಜರುಗಲಿವೆ.

 

ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆ:
ಉತ್ಸವದ ಪ್ರಮುಖ ಘಟ್ಟವಾದ ಬ್ರಹ್ಮರಥೋತ್ಸವವು ಏಪ್ರಿಲ್ 3ರಂದು ಮಧ್ಯಾಹ್ನ 12:00 ಗಂಟೆಯ ಶುಭ ಲಗ್ನದಲ್ಲಿ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಏ. 7ರ ಮಂಗಳವಾರ ಸಂಜೆ ಶ್ರೀ ಕಣಿವೆಮಾರಮ್ಮ ದೇವಿಗೆ ಸುಮಂಗಲೆಯರಿAದ ಅಕ್ಕಿ ತಂಬಿಟ್ಟಿನ ಆರತಿ ಸೇವೆ ನಡೆಯುವುದರೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಜಾತ್ರಾ ಪ್ರಯುಕ್ತ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ಅಬ್ಬಿನಹೊಳೆ ಮತ್ತು ಕಂಬತ್ತನಹಳ್ಳಿ ಗ್ರಾಮಸ್ಥರು ಕಾರ್ಯಕ್ರಮದ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಮಂಡಳಿಯು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9980607889, 8762219413, 9448372586ಕರೆ ಮಾಡಬಹುದು.

 

ಏಪ್ರಿಲ್  03 ರಂದು ಅಂಬಲಗೆರೆ ಶ್ರೀರಂಗನಾಥಸ್ವಾಮಿ ಬ್ರಹ್ಮರಥೋತ್ಸವ

ಹಿರಿಯೂರು ತಾಲ್ಲೂಕಿನ ಧಾರ್ಮಿಕ ಪುಣ್ಯಕ್ಷೇತ್ರವಾದ ಅಂಬಲಗೆರೆ ಗ್ರಾಮದಲ್ಲಿ ನೆಲೆಸಿರುವ ಶ್ರೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವವು ಏಪ್ರಿಲ್ 1 ರಿಂದ ಏಪ್ರಿಲ್ 4 ರವರೆಗೆ ಅತ್ಯಂತ ವಿಜೃಂಭಣೆಯಿAದ ಜರುಗಲಿದೆ. ಪೂಜಾ ಕಾರ್ಯಕ್ರಮಗಳ ಪ್ರಮುಖ ಘಟ್ಟವಾದ ‘ಬ್ರಹ್ಮ ರಥೋತ್ಸವ’ವು ಏಪ್ರಿಲ್ 3 ರಂದು ನಡೆಯಲಿದೆ ಎಂದು ದೇವಸ್ಥಾನದ ಸಮಿತಿ ತಿಳಿಸಿದೆ.

 

ಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ 1948ನೇ ಶ್ರೀ ಪರಾಭವ ನಾಮ ಸಂವತ್ಸರದ ಚೈತ್ರ ಶುದ್ಧ ಚತುರ್ದಶಿಯ ಪ್ರಯುಕ್ತ ಈ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 1 ರ ಬುಧವಾರ ರಾತ್ರಿ 8 ಗಂಟೆಗೆ ಗರುಡೋತ್ಸವದೊಂದಿಗೆ ಚಾಲನೆ ದೊರೆಯಲಿದೆ. ಏಪ್ರಿಲ್ 2 ರಂದು ರಾತ್ರಿ 10 ಗಂಟೆಗೆ ಪುಣ್ಯಾಹ, ಪಂಚಾಮೃತ ಅಭಿಷೇಕ, ತುಳಸಿ ಅರ್ಚನೆ ಹಾಗೂ ಕುಂಕುಮಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ. ಗ್ರಾಮಸ್ಥರು ಹಾಗೂ ಭಕ್ತಾದಿಗಳಿಂದ ಅರತಿ ರಥೋತ್ಸವ ನೆರವೇರಲಿದೆ.

 

ಏಪ್ರಿಲ್ 3 ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವೈಭವದ ಬ್ರಹ್ಮ ರಥೋತ್ಸವ ಜರುಗಲಿದ್ದು, ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಂದು ಸಹಸ್ರನಾಮ ಪೂಜೆ ಹಾಗೂ ರಾತ್ರಿ ಪಂಜಿನ ಸೇವೆ ನಡೆಯಲಿದೆ. ಏಪ್ರಿಲ್ 4 ರ ಶನಿವಾರದಂದು ಓಕುಳಿ ಬಂಡಿ ಕಾರ್ಯಕ್ರಮ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗದೊಂದಿಗೆ ಜಾತ್ರಾ ಮಹೋತ್ಸವವು ಮುಕ್ತಾಯಗೊಳ್ಳಲಿದೆ.

 

ಈ ಧಾರ್ಮಿಕ ಕೈಂಕರ್ಯಗಳಲ್ಲಿ ಅರ್ಚಕರಾದ ಶ್ರೀ ಎಸ್. ತಿಮ್ಮರಾಯಪ್ಪ ಮತ್ತು ಸಿಬ್ಬಂದಿ ವರ್ಗ, ಗ್ರಾಮದ ಆಡಳಿತಾಧಿಕಾರಿ ಹರ್ಷ ಜಿ., ಕಂದಾಯ ನಿರೀಕ್ಷಕ ಎನ್. ವರದರಾಜು, ಉಪ ತಹಶೀಲ್ದಾರ್ ನವೀನ್ ಕುಮಾರ್ ಡಿ. ಹಾಗೂ ಮುಜರಾಯಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಅಂಬಲಗೆರೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಲಾಗಿದೆ.
==========

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...