Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ಧಗಂಗಾ ಮಠದ ಬಗ್ಗೆ ಹಾಡಿ ಹೊಗಳಿದ ರಾಷ್ಟ್ರಪತಿ ದ್ರೌಪದಿ ಮುರ್ಮಾ

---Advertisement---

ತುಮಕೂರು : ಇಂದು ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಹುಟ್ಟುಹಬ್ಬ. 119ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆ ಮಠವನ್ನ ಅದ್ದೂರಿಯಾಗಿ ಅಲಂಕಾರ ಮಾಡಲಾಗಿದೆ. ಪ್ರತಿದಿನದ ದಾಸೋಹಕ್ಕಿಂತ ದೊಡ್ಡಮಟ್ಟದಲ್ಲಿಯೇ ಇಂದು ದಾಸೋಹ ನಡೆಯುತ್ತಿದೆ. ಇಂದಿನ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಕೂಡ ಬಂದಿದ್ದರು. ಈ ವೇಳೆ ಸಿದ್ಧಗಂಗಾ ಮಠದ ಬಗ್ಗೆ ಹಾಡಿ ಹೊಗಳಿದ್ದಾರೆ.

ಸಿದ್ಧಗಂಗಾ ಮಠಕ್ಕೆ ಬಂದಿರುವುದಕ್ಕೆ ನನಗೆ ತುಂಬಾನೇ ಖುಷಿಯಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ ಆಶ್ರಯದ ಮೂಲಕ ಮಠ ಸೇವೆ ಸಲ್ಲಿಸಿದ್ದು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದಿದ್ದಾರೆ.

ವೀರಶೈವ-ಲಿಂಗಾಯತ ಮಠಗಳು ತಮ್ಮದೇ ಆದ ಸೇವೆ ಸಲ್ಲಿಸುತ್ತಾ ಬಂದಿದ್ದು, ಅದರಲ್ಲಿ ಸಿದ್ಧಗಂಗಾಮಠ ಮುಂಚೂಣಿಯಲ್ಲಿದೆ. ಶಿವಕುಮಾರ ಸ್ವಾಮೀಜಿಗಳು ಇಷ್ಟು ವರ್ಷಗಳು ಒಂದೇ ಸ್ಥಳದಲ್ಲಿ ಒಂದೇ ಕಾರ್ಯ ನಿರಂತರವಾಗಿ ಮಾಡುವ ಮೂಲಕ ಜೀವನ ಸಮರ್ಪಣೆ ಮಾಡಿದ್ದಾರೆ. ಸ್ವಾಮೀಜಿಗಳ ದಾರಿಯನ್ನು ವಿಸ್ಮಯ ಹಾಗೂ ಪವಾಡ ಎನ್ನಬಹುದು ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಲಿಂಗಸ್ವಾಮೀಜಿ ಹೇಳಿದ್ದಾರೆ. ಶಿವಕುಮಾರ ಸ್ವಾಮೀಜಿಗಳ ಬದುಕಿನಲ್ಲಿ 2 ಘಟನೆಗಳಿವೆ. ಅವೆಂದರೆ ಬಡಮಕ್ಕಳಿಗೆ ಮತ್ತು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡೋದು ಎಂದು ಶ್ರೀಗಳು ತಿಳಿಸಿದರು.

ಇಂದು ಮಠದಲ್ಲೆಲ್ಲಾ ಅದ್ದೂರಿಯಾಗಿ ಸ್ವಾಮೀಜಿಗಳ ಹುಟ್ಟುಹಬ್ಬ ನಡೆಯುತ್ತಿದೆ. ಮಠದಲ್ಲಿ ಓದುತ್ತಿರುವ ಮಕ್ಕಳು, ಓದಿ ಹೋದ ಮಕ್ಕಳೆಲ್ಲಾ‌ ಸೇರಿ ಶ್ರೀಗಳನ್ನ ಸ್ಮರಣೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಸಹ ಶ್ರೀಗಳ ಜೊತೆಗಿನ ಫೋಟೋ ಹಾಕಿ, ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ. ಶ್ರೀಗಳು ಮಾಡಿರುವ ಸಮಾಜ ಸೇವೆ ಅಷ್ಟಿಷ್ಟಲ್ಲ. ಅದೆಷ್ಟೋ ಮಕ್ಕಳು ಈ ಮಠದಿಂದ ಕಲಿತು ಹೋಗಿದ್ದಾರೆ. ಅವರ ಭವಿಷ್ಯವೂ ಚೆನ್ನಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)