Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾರ್ತಾ ಇಲಾಖೆ: ಹಿರಿಯ ಸಹಾಯಕ ನಿರ್ದೇಶಕರಾಗಿ ಎಂ.ಜುಂಜಣ್ಣ ಅಧಿಕಾರ ಸ್ವೀಕಾರ

---Advertisement---

ಚಿತ್ರದುರ್ಗ. ಏಪ್ರಿಲ್01 : ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾಗಿ ಎಂ.ಜುಂಜಣ್ಣ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.

ಎಂ.ಜುಂಜಣ್ಣ ಅವರು ಚಿಕ್ಕಬಳ್ಳಾಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ, ಹಿರಿಯ ಸಹಾಯಕ ನಿರ್ದೇಶಕರಾಗಿ ಬಡ್ತಿ ಹೊಂದಿ ಚಿತ್ರದುರ್ಗ ಜಿಲ್ಲಾ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಮಂಗಳೂರು, ಉಡುಪಿ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

 

ಚಿತ್ರದುರ್ಗ ಕಚೇರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ವಿ.ತುಕಾರಾಂರಾವ್ ಅವರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ.
ಫೋಟೋ ವಿವರ: ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಎಂ.ಜುಂಜಣ್ಣ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now