ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಟ್ರಸ್ಟಿಗಳು ಹಾಗೂ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರಾಗಿರುವಂತಹ ಡಾಕ್ಟರ್ ಹೇಮಾವತಿವಿ ಹೆಗ್ಗಡೆಯವರು ರಾಜ್ಯದ ಕಡುಬಡವ ಕುಟುಂಬದವರಿಗೆ ಮಾಶಾಸನ ನೀಡುತಿದ್ದಾರೆ.
ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪ್ರಾದೇಶಿಕ ಕಚೇರಿಯಲ್ಲಿ 2132 ಕುಟುಂಬಗಳಿಗೆ ಪ್ರತಿ ತಿಂಗಳು ಮಾಶಾಸನ ನೀಡುವುದರೊಂದಿಗೆ ಅವರ ಆರೋಗ್ಯದ ಬಗ್ಗೆ ಕಾಳಜಿವಹಿಸಿ ವಾತ್ಸಲ್ಯ ಮಿಕ್ಸ್ ಆಹಾರ ಕಿಟ್ಟ್ ಮತ್ತು
950 ಕ್ಕೂ ಅಧಿಕ ವಾತ್ಸಲ್ಯ ಮನೆಗಳನ್ನು ನಿರ್ಮಾಣ ಮಾಡುವುದರ ಮೂಲಕ ಕಡುಬಡವರ ಕುಟುಂಬಕ್ಕೆ ಆಶ್ರಯದಾತರಾಗಿರುತ್ತಾರೆ.
ಏಪ್ರಿಲ್ 02 ರಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾಶಾಸನ ನೀಡುತ್ತಿರುವ ಫಲಾನುಭವಿಗಳಿಗೆ ಹಣ್ಣು ಹಂಪಲು ನೀಡುವುದರ ಮೂಲಕ ಹುಟ್ಟುಹಬ್ಬವನ್ನು ರಾಜ್ಯಾದ್ಯಂತ ಆಚರಿಸಲಾಯಿತು. ಈ ಸಂದರ್ಭ ಮಾಶಾಸನ ಫಲಾನುಭವಿಗಳಿಗೆ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ಗೀತಾ ಬಿ, ಚಿತ್ರದುರ್ಗ ಜಿಲ್ಲಾ ನಿರ್ದೇಶಕರಾದಂತಹ ಕಮಲಾಕ್ಷಿ , ಚಿತ್ರದುರ್ಗ ತಾಲ್ಲೂಕು ಯೋಜನಾಧಿಕಾರಿಗಳಾದ ಚಂದ್ರಹಾಸ್. ಬಿ, ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿ ಶ್ರೀಮತಿ ರತ್ನ, ಚಿತ್ರದುರ್ಗ ತಾಲೂಕಿನ ಸಮನ್ವಯುಧಿಕಾರಿ ಶ್ರೀಮತಿ ಚಂದ್ರಮ್ಮ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರಿಂದ ಹುಟ್ಟು ಹಬ್ಬದ ಪ್ರಯುಕ್ತ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಶುಭ ಕೋರಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











