Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾರ್ಯಕ್ರಮದ ವೇಳೆ ಅಸ್ವಸ್ಥಗೊಂಡ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಆಸ್ಪತ್ರೆಗೆ ದಾಖಲು

---Advertisement---

ನಾಡಿನ ಖ್ಯಾತ ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಗುರುವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡು ವೇದಿಕೆಯ ಮೇಲೆಯೇ ಕುಸಿದುಬಿದ್ದ ಘಟನೆ ನಡೆದಿದೆ. ತಕ್ಷಣವೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ.ಬೆಂಗಳೂರಿನ ಮಹಾರಾಣಿ ಕಾಲೇಜು ಸಮೀಪದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹೆಗ್ಡೆ, ಭಾಷಣ ಮಾಡುತ್ತಿದ್ದ ವೇಳೆ ಸಮತೋಲನ ಕಳೆದುಕೊಂಡು ಬಿದ್ದರು.

ಕುಸಿದುಬಿದ್ದ ಬಳಿಕ ವಾಂತಿ ಮಾಡಿಕೊಂಡಿದ್ದು, ಪರಿಸ್ಥಿತಿ ಗಂಭೀರವಾಗಿರುವುದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಆಯೋಜಕರು ಹಾಗೂ ಸಾರ್ವಜನಿಕರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು.
ಆಸ್ಪತ್ರೆಯಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಗಣನೀಯವಾಗಿ ಕುಸಿದಿರುವುದು ಪತ್ತೆಯಾಗಿದೆ. ಇದೇ ವೇಳೆ ಲಘು ಹೃದಯಾಘಾತ ಸಂಭವಿಸಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತಜ್ಞ ವೈದ್ಯರ ತಂಡದಿಂದ ನಿಗಾ ವಹಿಸಲಾಗುತ್ತಿದೆ.

ಪ್ರಾಮಾಣಿಕ ನ್ಯಾಯಮೂರ್ತಿಯಾಗಿ ಹೆಸರಾಗಿರುವ ಹೆಗ್ಡೆ ಅವರ ಆರೋಗ್ಯದ ಕುರಿತು ಸುದ್ದಿ ತಿಳಿದಂತೆ ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ಆತಂಕ ಹೆಚ್ಚಾಗಿದೆ. 80 ವರ್ಷ ದಾಟಿದರೂ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು ಶೀಘ್ರ ಗುಣಮುಖರಾಗಲಿ ಎಂಬ ಆಶಯ ವ್ಯಕ್ತವಾಗುತ್ತಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ಅವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದ್ದು, ಅಗತ್ಯ ಪರೀಕ್ಷೆಗಳು ಮುಂದುವರಿದಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now