Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿ.ಶಿವಲಿಂಗಪ್ಪ ಹತ್ಯೆ ಖಂಡನೆ: ಆರೋಪಿಗಳ ಬಂಧನಕ್ಕೆ ಮಡಿವಾಳರ ಸಂಘದಿಂದ ಪ್ರತಿಭಟನೆ, ಮನವಿ ಸಲ್ಲಿಕೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಮಡಿವಾಳ ಸಮಾಜದ ಬಿ.ಶಿವಲಿಂಗಪ್ಪನವರನ್ನು ಭೀಕರವಾಗಿ ಹತ್ಯೆಗೈದಿರುವುದನ್ನು ಖಂಡಿಸಿ ಜಿಲ್ಲಾ ಮಡಿವಾಳರ ಸಂಘ ಹಾಗೂ ಸಾಮಾಜಿಕ ಸಂಘರ್ಷ ಸಮಿತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ರಕ್ಷಣಾಧಿಕಾರಿ ಡಾ.ಆರ್.ಶಿವಕುಮಾರ್‍ಗೆ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ರಕ್ಷಣಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ದಾರಿಯುದ್ದಕ್ಕೂ ಹತ್ಯೆಕೋರರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

 

ಮಡಿವಾಳ ಜನಾಂಗಕ್ಕೆ ಸೇರಿದ ಬಿ.ಶಿವಲಿಂಗಪ್ಪನವರು ರಾಜಕಾರಣ ಹಾಗೂ ಉದ್ಯಮದಲ್ಲಿ ವೇಗವಾಗಿ ಬೆಳೆಯುತ್ತಿರುವುದನ್ನು ಕಂಡು ಸಹಿಸದವರಿಂದ ಹತ್ಯೆಯಾಗಿರಬಹುದೆಂಬ ಅನುಮಾನವಿದ್ದು, ತನಿಖೆ ನಡೆಸಿ ಶೀಘ್ರವೇ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿದಾಗ ದುಃಖತಪ್ತ ಕುಟುಂಬಕ್ಕೆ ನ್ಯಾಯ ಒದಗಿಸಿದಂತಾಗುತ್ತದೆಂದು ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಜಿಲ್ಲಾ ಮಡಿವಾಳರ ಸಂಘದ ಗೌರವಾಧ್ಯಕ್ಷ ಡಾ.ವಿ.ಬಸವರಾಜ್ ಹೆಚ್ಚುವರಿ ರಕ್ಷಣಾಧಿಕಾರಿಯವರನ್ನು ಒತ್ತಾಯಿಸಿದರು.

 

ಮನವಿ ಸ್ವೀಕರಿಸಿದ ಹೆಚ್ಚುವರಿ ರಕ್ಷಣಾಧಿಕಾರಿ ಡಾ.ಆರ್.ಶಿವಕುಮಾರ್, ಮೃತದೇಹ ಪತ್ತೆಯಾದ ಜಾಗಕ್ಕೆ ಜಿಲ್ಲಾ ರಕ್ಷಣಾಧಿಕಾರಿ, ನಾನು ಮತ್ತು ಡಿವೈಎಸ್ಪಿ. ಭೇಟಿ ನೀಡಿದೇವೆ. ಹಂತಕರ ಪತ್ತೆಗೆ ತಂಡ ರಚಿಸಿದ್ದು, ಆದಷ್ಟು ಬೇಗನೆ ಹತ್ಯೆಕೋರರನ್ನು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.

 

ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಬಿ.ರಾಮಜ್ಜ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುನಾಥ್, ಮಡಿವಾಳ ಸಮಾಜದ ವಿರುಪಾಕ್ಷಪ್ಪ, ಲೋಕೇಶ್ವರಪ್ಪ, ರಾಮಕೃಷ್ಣ, ಧ್ರುವಕುಮಾರ್, ಬಸವರಾಜ್, ನಾಗಣ್ಣ, ಮಂಜುನಾಥ್, ಟಿ.ರುದ್ರಮುನಿ, ರಮೇಶ್, ರಂಗಮ್ಮ, ಪ್ರಕಾಶ್ ಎಸ್‍ಜೆಎಂಐಟಿ, ರಮೇಶ್ ಜಗಳೂರು, ಮಾದಿಗರ ಸಾಂಸ್ಕøತಿಕ ಸಂಘದ ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಲ್ಲಿಕಾರ್ಜುನ್, ಸಾಮಾಜಿಕ ಸಂಘರ್ಷ ಸಮಿತಿಯ ಪ್ರೊ.ಸಿ.ಕೆ.ಮಹೇಶ್, ಟಿ.ರಾಮು, ರಾಮುಗೋಸಾಯಿ, ಸಿ.ಎ.ಚಿಕ್ಕಣ್ಣ, ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...