Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ದಾವಣಗೆರೆ ಕಂದಾಯ ನಿರೀಕ್ಷಕ..!

---Advertisement---

ದಾವಣಗೆರೆ: ಲಂಚದ ಭೂತ ಅಧಿಕಾರಿಗಳ ಬೆನ್ನಟ್ಟಿ ಬಹಳಷ್ಟು ವರ್ಷಗಳೇ ಕಳೆದು ಹೋಗಿದೆ. ಅದರೆ ಇತ್ತೀಚಿನ ದಿನಗಳಲ್ಲಿ ಜನ ಕೂಡ ಧೈರ್ಯವಂತರಾಗಿದ್ದಾರೆ. ಲಂಚ ಕೇಳಿದ ಅಧಿಕಾರಿಗಳನ್ನ ಲೋಕಾಯುಕ್ತ ಅಧಿಕಾರಿಗಳ ಎದುರು ಸಿಕ್ಕಿ ಹಾಕುತ್ತಿದ್ದಾರೆ. ಇದೀಗ ದಾವಣಗೆರೆಯಲ್ಲೂ ಅಂತದ್ದೇ ಘಟನೆ ನಡೆದಿದೆ. ಭೂಮಿ ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ವೈದ್ಯರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಚಂದ್ರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ದಾವಣಗೆರೆ ಜಿಲ್ಲೆಯ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಪ್ಪ ಅವರು, ಭೂಮಿಯ ಸರ್ವೆ ಕೆಲಸ ಮಾಡಿಕೊಡಲು ವೈದ್ಯರೊಬ್ಬರಿಂದ 50,000 ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ವೈದ್ಯರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಇಂದು ವೈದ್ಯರಿಂದ 50 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಚಂದ್ರಪ್ಪ ಅವರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ಪಿ ಎಂ ಎಸ್ ಕೌಲಾಪುರ ಅವರ ನೇತೃತ್ವದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಸದ್ಯ ಆರೋಪಿ ಚಂದ್ರಪ್ಪ ಅವರನ್ನು ಬಂಧಿಸಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು, ನೌಕರರು ಲಂಚಕ್ಕೆ ಬೇಡಿಕೆಯಿಟ್ಟರೆ ತಕ್ಷಣ ಲೋಕಾಯುಕ್ತಕ್ಕೆ ದೂರು ನೀಡುವ ಮೂಲಕ ಭ್ರಷ್ಟಾಚಾರ ಮುಕ್ತ ಸಮಾಜಕ್ಕೆ ಸಹಕರಿಸಿ. ಸದ್ಯ ಅಧಿಕಾರಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now