Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಳೆಯ ವಾಹನಗಳಿಗೆ HSRP ಕಡ್ಡಾಯ:  ಸಾರಿಗೆ ಇಲಾಖೆ ಸ್ಪಷ್ಟನೆ

---Advertisement---

ರಾಜ್ಯದಲ್ಲಿ ಹಳೆಯ ವಾಹನಗಳಿಗೆ ಹೈ-ಸಿಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಾಗಿದ್ದು, ಈ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಹಳೆಯ ವಾಹನಗಳಿಗೆ HSRP ಕಡ್ಡಾಯ ನಿಯಮ ಹಿಂಪಡೆಯಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ, ಇಲಾಖೆ ಸ್ಪಷ್ಟನೆ ನೀಡಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದೆ.

2019ರ ಏಪ್ರಿಲ್‌ಗೂ ಮೊದಲು ನೋಂದಾಯಿತ ಎಲ್ಲಾ ವಾಹನಗಳಿಗೂ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ವಾಹನಗಳ ಸುರಕ್ಷತೆ ಹಾಗೂ ಕಳ್ಳತನ ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಜಾರಿಗೊಳಿಸಲಾಗಿದ್ದು, ವಾಹನ ಮಾಲೀಕರು ತಡಮಾಡದೆ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.ಇದೇ ವೇಳೆ, ಈ ಸಂಬಂಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯನ್ನು ಏಕಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿದೆ. ಆದರೆ ನ್ಯಾಯಾಲಯವು ಸಾರಿಗೆ ಇಲಾಖೆಯ ಆದೇಶಕ್ಕೆ ಯಾವುದೇ ತಡೆಯಾಜ್ಞೆ ನೀಡಿಲ್ಲ.

ಬದಲಾಗಿ HSRP ಜಾರಿಗೆ ಸಂಬಂಧಿಸಿದಂತೆ ತರಾತುರಿ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ.ಹೀಗಾಗಿ, ಹಳೆಯ ವಾಹನ ಮಾಲೀಕರು ಯಾವುದೇ ಸುಳ್ಳು ಸುದ್ದಿಗಳನ್ನು ನಂಬದೆ, ನಿಯಮಾನುಸಾರ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯ ಎಂದು ಸಾರಿಗೆ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...