Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಿಜೆಪಿಯ 47 ನೇ ಸಂಸ್ಥಾಪನಾ ದಿನಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 06 : ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿರವರ ನಿವಾಸದಲ್ಲಿ ಸೋಮವಾರ ಬಿಜೆಪಿ 47 ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

ಶ್ಯಾಂಪ್ರಸಾದ್ ಮುಖರ್ಜಿ, ಪಂಡಿತ್ ದೀನ್‍ದಯಾಳ್ ಉಪಾಧ್ಯರವರು ಸ್ಥಾಪಿಸಿದ ಜನಸಂಘ 1980 ರಲ್ಲಿ ಬಿಜೆಪಿ ಪಕ್ಷವಾಗಿ ಈಗ ದೊಡ್ಡ ಹೆಮ್ಮರವಾಗಿ ಬೆಳೆದಿದೆ. ಅಟಲ್‍ಬಿಹಾರಿ ವಾಜಪೇಯಿ, ಲಾಲ್‍ಕೃಷ್ಣ ಅಡ್ವಾಣಿರವರು ಬಿಜೆಪಿ ಯನ್ನು ದೊಡ್ಡ ಪಕ್ಷವನ್ನಾಗಿ ಬೆಳೆಸಿದ್ದು, ಈಗಿನ ಪ್ರಧಾನಿ ನರೇಂದ್ರಮೋದಿರವರು ಭಾರತವನ್ನು ಇಡಿ ವಿಶ್ವದಲ್ಲಿಯೇ ಶಕ್ತಿಶಾಲಿ ರಾಷ್ಟ್ರವನ್ನಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆಂದು ಗುಣಗಾನ ಮಾಡಿದರು.

 

ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಉಪಾಧ್ಯಕ್ಷರುಗಳಾದ ಡಾ.ಸಿದ್ದಾರ್ಥ, ಶೈಲಜಾರೆಡ್ಡಿ, ಸಂಸ್ಥಾಪನಾ ದಿನಾಚರಣೆಯ ಸಂಚಾಲಕ ಮಾಧುರಿ ಗಿರೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್‍ಯಾದವ್, ಜಿ.ಹೆಚ್.ಮೋಹನ್‍ಕುಮಾರ್, ಜಿಲ್ಲಾ ವಕ್ತಾರ ನಾಗರಾಜ್‍ಬೇದ್ರೆ, ಕಾರ್ಯದರ್ಶಿ ಪಾಲಯ್ಯ, ನಗರಾಧ್ಯಕ್ಷ ಲೋಕೇಶ್, ಉಪಾಧ್ಯಕ್ಷ ವಿ.ಆರ್.ನಾಗರಾಜ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಶಿವಣ್ಣಾಚಾರ್, ಸಂಪತ್‍ಕುಮಾರ್, ಸಿದ್ದಾಪುರ ಸುರೇಶ್, ಎ.ವಿ.ಮಂಜುಳಮ್ಮ, ಬಸಮ್ಮ, ಲೀಲಾವತಿ, ವೀಣ, ದಗ್ಗೆಶಿವಪ್ರಕಾಶ್, ಕಿರಣ್, ಶಂಭು, ವಸಂತ್, ಮಲ್ಲಿಕಾರ್ಜುನ್, ಸಿಂಧುತನಯ, ಉಮ ಇನ್ನು
ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...