Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮರಗಿಡ ಕಡಿಯದಂತೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 06 : ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಹಾಗೂ ತೋಟಗಾರಿಕಾ ಇಲಾಖೆ ಕಚೇರಿ ಆವರಣದಲ್ಲಿರುವ ಗಿಡ-ಮರಗಳನ್ನು ಕಡಿದು ಪರಿಸರ ನಾಶ ಮಾಡುವುದನ್ನು ವಿರೋಧಿಸಿ ಪರಿಸರ ಪ್ರೇಮಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳವರು ಒನಕೆ ಓಬವ್ವ ವೃತ್ತದಲ್ಲಿ ಸೋಮವಾರ ಧರಣಿ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

 

ಸರ್ಕಾರಿ ವಿಜ್ಞಾನ ಕಾಲೇಜು ಎದುರಿನ ಆವರಣದಲ್ಲಿ ಮಹಿಳಾ ಕಾಲೇಜು ಕಟ್ಟುವುದಕ್ಕಾಗಿ ಕಡಿಯಲಾಗಿರುವ ಮರದ ಬೇರೊಂದನ್ನು ಧರಣಿಯ ಸ್ಥಳದಲ್ಲಿರಿಸಿ ಹುತಾತ್ಮ ಮರವೆಂದು ಪೂಜಿಸಿ ಪುಷ್ಪ ನಮನ ಗೈಯುವ ಮೂಲಕ ಗಿಡ-ಮರಗಳನ್ನು ಕಡಿಯದಂತೆ ಅಧಿಕಾರಿಗಳನ್ನು ಒತ್ತಾಯಿಸಿ ಧರಣಿÂನಿರತರು ಮನವಿ ಅರ್ಪಿಸಿದರು.

 

ಪರಿಸರ ಪ್ರೇಮಿ ಹೆಚ್.ಎಸ್.ಕೆ.ಸ್ವಾಮಿ, ನಾಗರಾಜ್‍ಬೇದ್ರೆ, ಎಸ್.ಲಕ್ಷ್ಮಿಕಾಂತ್, ಡಾ.ನಟರಾಜ್, ನ್ಯಾಯವಾದಿಗಳಾದ ದಿಲ್‍ಶಾದ್, ಸೈಯದ್ ಸ್ವಾಲೇಹ, ರೈತ ಮುಖಂಡ ಕಸವನಹಳ್ಳಿ ರಮೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ನಿವೃತ್ತ ಪಿ.ಎಸ್.ಐ. ನಾಗರಾಜ್, ಇನ್ನರ್‍ವೀಲ್ ಚಿತ್ರದುರ್ಗ ಫೋರ್ಟ್‍ನ ಜಾನ ಚಂದ್ರಕಲಾ, ಪದ್ಮಾವತಿ, ಎಂ.ಬಿ.ಜಯದೇವಮೂರ್ತಿ ಇನ್ನು ಅನೇಕರು ಧರಣಿಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...