ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 38,083 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ 31,539 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 15,4774 RTPCR ಟೆಸ್ಡ್ ಸೇರಿದಂತೆ ಒಟ್ಟು 186313 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 38,083 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 17717 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ 67236 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 49 ಜನ ಸಾವನ್ನಪ್ಪಿದ್ದಾರೆ.