ಸುದ್ದಿಒನ್.ಏ.07: ಯಾವುದೇ ಅಪಘಾತ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಮೊದಲ ಒಂದು ಗಂಟೆಯ ಸಮಯ (ಉoಟಜeಟಿ ಊouಡಿ) ಅತ್ಯಂತ ನಿರ್ಣಾಯಕ ಎಂದು ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ರವೀಂದ್ರ ಎಸ್.ಪಿ. ಹೇಳಿದರು.
ಸೋಮವಾರ ಜೀವ ರಕ್ಷಾ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಹಾಗೂ ಸ್ವಾಮಿ ವಿವೇಕಾನಂದ ಯುವ ಚಳುವಳಿಯ ಜಂಟಿ ಆಶ್ರಯದಲ್ಲಿ ಚಿತ್ರದುರ್ಗದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಸಿ.ಎಂ.ಸಿ & ಆರ್.ಐ) ಏಪ್ರಿಲ್ 6 ರಿಂದ 11 ರವರೆಗೆ ಆರು ದಿನಗಳ ಕಾಲ ನಡೆಯಲಿರುವ ‘ಸಮಗ್ರ ತುರ್ತು ಆರೈಕೆ ಮತ್ತು ಜೀವ ಬೆಂಬಲ’ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತುರ್ತು ಹಾಗೂ ಅಪಘಾತ ಸಮಯದಲ್ಲಿ ನೀಡುವ ಚಿಕಿತ್ಸಾ ವಿಧಾನಗಳನ್ನು ತರಬೇತಿಯುಲ್ಲಿ ಪ್ರಾಯೋಗಿಕವಾಗಿ ತಿಳಿಸಿಕೊಡಲಾಗುದು. ವಿದ್ಯಾರ್ಥಿಗಳು ಇವುಗಳನ್ನು ಕಲಿತು ಅನೇಕ ಅಮೂಲ್ಯ ಜೀವಗಳನ್ನು ಉಳಿಸಲು ಪ್ರಯತ್ನಿಸಬೇಕು ಎಂದು ಡಾ. ರವೀಂದ್ರ ಎಸ್.ಪಿ. ತಿಳಿಸಿದರು.
ಬಸವೇಶ್ವರ ವೈದ್ಯಕೀಯ ಕಾಲೇಜಿನ ಡೀನ್ ಡಾ. ರಾಜೇಶ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ. ಪಾಲಾಕ್ಷಪ್ಪ ಅವರು ಮಾತನಾಡಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ತರಬೇತಿಯ ಅಗತ್ಯತೆ ಮತ್ತು ಅದರ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು.
ಸಿ.ಎಂ.ಸಿ & ಆರ್.ಐ ನ ಡೀನ್ ಮತ್ತು ನಿರ್ದೇಶಕರಾದ ಡಾ. ಬಿ.ವೈ. ಯುವರಾಜ್ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ಸಹಕರಿಸಿದ ಜೀವ ರಕ್ಷಾ ಮತ್ತು ಸಂಸ್ಥೆಗಳಿಗೆ ಧನ್ಯವಾದ ಅರ್ಪಿಸಿದರು. ಮುಂದಿನ ದಿನಗಳಲ್ಲಿ ಈ ತರಬೇತಿಯನ್ನು ಜಿಲ್ಲಾ ಆಸ್ಪತ್ರೆಯ ನರ್ಸಿಂಗ್ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರ ಅಧ್ಯಾಪಕರಿಗೂ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಿದ್ಧಗಂಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ನಳಿನಾ ಮತ್ತು ಬಸವೇಶ್ವರ ವೈದ್ಯಕೀಯ ಕಾಲೇಜಿನ ಡಾ. ಲಾವಣ್ಯ ಉಪಸ್ಥಿತರಿದ್ದರು. ಕಾರ್ಯಕ್ರಮವು ನಾಡಗೀತೆಯೊಂದಿಗೆ ಹಾಡುವುದರೊಂದಿಗೆ ಆರಂಭಿಸಲಾಯಿತು. ಅಶ್ವಿನಿ ಎಲ್.ಎಚ್. ಸ್ವಾಗತ ಮತ್ತು ವಿದ್ಯಾರ್ಥಿ ಹಿಮಂತ್ ಪ್ರಾರ್ಥಿಸಿದರು. ವಿದ್ಯಾರ್ಥಿ ಮನೋಜ್ ವಂದಿಸಿದರು, ರಾಷ್ಟ್ರಗೀತೆ ಗಾಯನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.




















