Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಲವೇ ದಿನಗಳಲ್ಲಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್ : ರಮೇಶ್ ಜಾರಕಿಹೊಳಿ ಮಾಹಿತಿ

---Advertisement---

ಬೆಳಗಾವಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಬಿಜೆಪಿ ಸದ್ಯ ಉಚ್ಛಾಟನೆ ಮಾಡಿದೆ. ಆದ್ರೆ ಪಕ್ಷಕ್ಕೆ ಮರಳುವುದಕ್ಕೆ ಎಲ್ಲಾ ಸಿದ್ಧತೆಗಳು ಆಗಿದೆ ಅಂತ ರಮೇಶ್ ಜಾರಕಿಹೊಳಿ ಶಾಕಿಂಗ್ ವಿಚಾರ ತಿಳಿಸಿದ್ದಾರೆ. ಕೆಲವೇ ದಿನಗಳಲ್ಲಿ ಬಿಜೆಪಿಗೆ ಮರಳಲಿದ್ದಾರೆ ಎಂದು ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬಾಗಲಕೋಟೆ ಚುನಾವಣಾ‌ ಪ್ರಚಾರದ ವಿಚಾರಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೇ ಪ್ರಚಾರ ಮಾಡಲಿ ಎಂದಿದ್ದರು. ಈ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಈ ರೀತಿ ಹೇಳಿದ್ದಾರೆ.

ಉಚ್ಛಾಟನೆಯಾದ ದಿನದಿಂದ ನಾನು ಯತ್ನಾಳ್ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ವೇದಿಕೆಯೂ ಸಜ್ಜಾಗಿದೆ. ಯತ್ನಾಳ್ ಬಿಜೆಪಿಗೆ ಬಂದರೆ ಒಳ್ಳೆಯದು. ಹಿಂದೂ ಸಂಘಟನೆ ಮತ್ತು ಬಿಜೆಪಿ ಮತ ಕ್ರೋಢಿಕರಣಕ್ಕೆ ಅನುಕೂಲವಾಗುತ್ತದೆ. ಉಪಚುನಾವಣೆಯಲ್ಲಿ ನಮ್ಮ ಪಕ್ಷದವರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದ್ದು ಗೆಲ್ಲುವ ಆಶಾಭಾವನೆಯನ್ನು ನಾವು ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಮೂಲಕ ಬಿಜೆಪಿಯ ಹಿಂದೂ ಹುಲಿ ಎಂದೇ ಫೇಮಸ್ ಆಗಿರುವ ಯತ್ನಾಳ್ ಬಿಜೆಪಿಗೆ ಬೇಕೆ ಬೇಕು ಎಂಬಂತ ಮಾತುಗಳು ಹಲವರಿಂದ ಕೇಳಿ ಬರ್ತಿದೆ. ಆದರೆ ಯತ್ನಾಳ್ ಅವರು ಮಾತ್ರ ಯಡಿಯೂರಪ್ಪ ಅವರ ಕುಟುಂಬದ ಮೇಲೆ ಆಕ್ರೋಶ ಭರಿತರಾಗಿದ್ದು, ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದನ್ನ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now