Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಮಾನ ವೇತನಕ್ಕೆ ಸಾರಿಗೆ ನೌಕರರ ಹೋರಾಟ: ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ಬೆಂಗಳೂರಿಗೆ ಪಾದಯಾತ್ರೆ ಆರಂಭ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 08 : ಚುನಾವಣಾ ಪೂರ್ವದಲ್ಲಿ ಘೋಷಿಸಿದ ಪ್ರಣಾಳಿಕೆಯಂತೆ ಸರ್ಕಾರಿ ನೌಕರರಂತೆ ಸಾರಿಗೆ ನೌಕರರಿಗೂ ಏಳನೆ ವೇತನ ಆಯೋಗದ ಮಾದರಿಯಲ್ಲಿ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಲಾಯಿತು.

 

ದಿನಾಂಕ : 1-1-2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಿಸಲಾಗಿದ್ದು, 38 ತಿಂಗಳ ಹಿಂಬಾಕಿಯನ್ನು ನೀಡಬೇಕು. ಈಗಾಗಲೆ ಸರ್ಕಾರ 26 ತಿಂಗಳ ಬಾಕಿ ವೇತನ ನೀಡಲು ಸುತ್ತೋಲೆ ಹೊರಡಿಸಿದ್ದು, ಬಾಕಿ 12 ತಿಂಗಳ ವೇತನವನ್ನು ಸರ್ಕಾರ ಅಥವಾ ಸಂಸ್ಥೆ ಭರಿಸಬೇಕು. ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ನಡೆಸಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಏ.8 ರಿಂದ ಆರಂಭಗೊಂಡಿರುವ ಪಾದಯಾತ್ರೆ 21 ರಂದು ಬೆಂಗಳೂರು ತಲುಪಿ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್.ಚಂದ್ರಶೇಖರ್ ತಿಳಿಸಿದರು.

 

ಪ್ರೊ.ಕೆ.ಇ.ರಾಧಕೃಷ್ಣ, ಆಂಜಿನಪ್ಪ, ಜಯರಾಂ ರಾಥೋಡ್, ಲೋಕೇಶ್, ಹನುಮಂತಪ್ಪ, ಸಿಬ್ಬಂದಿಗಳ ಕುಟುಂಬದವರಾದ ರೇಣುಕ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...