Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ | ವದಂತಿಗಳಿಗೆ ಕಿವಿಗೊಡಬೇಡಿ : ಸಾರ್ವಜನಿಕರಿಗೆ ಕರೆ

---Advertisement---

 

ಚಿತ್ರದುರ್ಗ. ಏ 08:   ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‍ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‍ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ.

ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಮಾತ್ರ ಅಲ್ಪಮಟ್ಟಿನ ಕೊರತೆ ಕಂಡುಬಂದಿದ್ದು, ಇದನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ IOC  (ಇಂಡಿಯನ್ ಆಯಿಲ್),BPC (ಭಾರತ್ ಪೆಟ್ರೋಲಿಯಂ) ಮತ್ತು HPC (ಹಿಂದೂಸ್ತಾನ್ ಪೆಟ್ರೋಲಿಯಂ) ಮೂಲಕ ಹೆಚ್ಚಿನ ಪ್ರಮಾಣದ ಅನಿಲವನ್ನು ಪೂರೈಕೆ ಮಾಡಲಾಗುತ್ತಿದೆ.
ಹಿಂದೆ ಈ ಮೂರು ಸಂಸ್ಥೆಗಳು ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಅನ್ನು ಸರಬರಾಜು ಮಾಡುತ್ತಿದ್ದವು. ಆದರೆ ಪ್ರಸ್ತುತ ಬೇಡಿಕೆಯನ್ನು ಪೂರೈಸಲು ಸರಬರಾಜು ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸದ್ಯ ಪ್ರತಿದಿನ ಸರಾಸರಿ 83.58 ಮೆಟ್ರಿಕ್ ಟನ್ ಗ್ಯಾಸ್ ಅನ್ನು ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೂರೈಸಲಾಗುತ್ತಿದೆ.

 

ಕಳೆದ ಐದು ದಿನಗಳ ಪೂರೈಕೆ ವಿವರ: ಕಳೆದ ಏಪ್ರಿಲ್ 2 ರಿಂದ ಏಪ್ರಿಲ್ 6 ರವರೆಗಿನ ಅಂಕಿಅಂಶಗಳನ್ನು ಗಮನಿಸಿದರೆ, ಪೂರೈಕೆಯಲ್ಲಿ ಸ್ಥಿರತೆ ಇರುವುದು ಕಂಡುಬರುತ್ತದೆ. ಏಪ್ರಿಲ್ 2 ರಂದು 87.78 ಮೆಟ್ರಿಕ್ ಟನ್, ಏಪ್ರಿಲ್ 3 ರಂದು 86.05 ಮೆಟ್ರಿಕ್ ಟನ್, ಏಪ್ರಿಲ್ 4 ರಂದು 84.80 ಮೆಟ್ರಿಕ್ ಟನ್, ಏಪ್ರಿಲ್ 5 ರಂದು ಗರಿಷ್ಠ 94.11 ಮೆಟ್ರಿಕ್ ಟನ್ ಹಾಗೂ ಏಪ್ರಿಲ್ 6 ರಂದು 83.58 ಮೆಟ್ರಿಕ್ ಟನ್ ಅನಿಲವನ್ನು ಈ ಮೂರು ಪ್ರಮುಖ ಸಂಸ್ಥೆಗಳು ಯಶಸ್ವಿಯಾಗಿ ಪೂರೈಕೆ ಮಾಡಿವೆ.

 

ಆದ್ದರಿಂದ, ರಾಜ್ಯದ ಆಟೋ ಮಾಲೀಕರು ಮತ್ತು ಚಾಲಕರು ಇಂತಹ ಯಾವುದೇ ಸುಳ್ಳು ವದಂತಿಗಳನ್ನು ನಂಬಬಾರದು ಮತ್ತು ಆತಂಕಕ್ಕೊಳಗಾಗಿ ಬಂಕ್‍ಗಳ ಮುಂದೆ ಸಾಲುಗಟ್ಟಿ ನಿಲ್ಲಬಾರದು ಎಂದು ಸರ್ಕಾರ ಮನವಿ ಮಾಡಿದೆ. ಅನಿಲ ಪೂರೈಕೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
============

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...