Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಸರಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ : ಕುಮಾರಸ್ವಾಮಿ ಆಕ್ರೋಶ

Facebook
Twitter
Telegram
WhatsApp

ಬೆಂಗಳೂರು: ಕನ್ನಡದ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲಾರಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದು, ಆಕ್ರೋಶ ಹೊರಹಾಕಿದ್ದಾರೆ.

ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ ʼ101.3 ಎಫ್ ಎಂ ರೇನ್ ಬೋ ಕನ್ನಡ ಕಾಮನಬಿಲ್ಲುʼ ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಹೊರಟಿರುವುದು ಅಕ್ಷಮ್ಯ. ಕನ್ನಡಕ್ಕೆ ಕೊಡಲಿ ಪೆಟ್ಟು.

ʼರೇನ್ ಬೋ ಕನ್ನಡ ಕಾಮನಬಿಲ್ಲುʼ ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯಬಡಿತ, ಕನ್ನಡದ ಅಸ್ಮಿತೆ ಕೂಡ. ಆದರೆ, ಕೇಂದ್ರ ಸರಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ.

ಈ ಹಿಂದೆ ಕನ್ನಡಿಗರ ಮನೆಮನದಲ್ಲಿ ತುಂಬಿದ್ದ ʼಅಮೃತವರ್ಷಿಣಿʼಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರಕಾರ, ಕನ್ನಡ ದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!