ಚಿತ್ರದುರ್ಗ. ಏ.10: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.
ಈ ಬಾರಿಯ ಪರೀಕ್ಷೆಯಲ್ಲಿ ಕಾಲೇಜಿನ 21 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದಿದ್ದಾರೆ. ಉಳಿದಂತೆ 116 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 66 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 39 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಎಸ್.ಅಜಯ್ (572 ಅಂಕ), ವಿಜ್ಞಾನ ವಿಭಾಗದಲ್ಲಿ ಆರ್.ಸಂದೀಪ (558 ಅಂಕ) ಹಾಗೂ ಕಲಾ ವಿಭಾಗದಲ್ಲಿ ವಿ. ರಾಮಾಂಜಿನೇಯ (551 ಅಂಕ) ಅವರು ಅತಿ ಹೆಚ್ಚು ಅಂಕಗಳನ್ನು ಪಡೆದು ಕಾಲೇಜಿನ ಟಾಪರ್ಗಳಾಗಿ ಹೊರಹೊಮ್ಮಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಚಿತ್ರದುರ್ಗ ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಸಮಿತಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.












