ಬೆಂಗಳೂರು: ತಡೆಗೋಡೆ ನಿರ್ಮಾಣದ ವೇಳೆ ಗುಡ್ಢ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಘಟನೆ ನಿನ್ನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ನಲ್ಲಿ ನಡೆದಿತ್ತು. ಇಂದು ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಯಿತು.
ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ತಡೆಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲಿಯೇ ಮೃತ ಪಟ್ಟಿದ್ದರು. ಪೊಲೀಸರು ಕೂಡ ಅದನ್ನ ಸ್ಪಷ್ಟಪಡಿಸಿದ್ದರು. ಮೃತ ಕಾರ್ಮಿಕರನ್ನು ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಎಂದು ಗುರುತಿಸಲಾಗಿದೆ. ಕುಟುಂಬಸ್ಥರಿಗೆ ಪರಿಹಾರ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಸರ್ಕಾರ ನೆರವಾಗಿದ್ದಾರೆ. 40 ರ ಆಸುಪಾಸಿಬ ಪುರುಷರೇ ಸಾವನ್ನಪ್ಪಿದ್ದು, ಮನೆಯವರ ಸಂಕಟ ಹೆಚ್ಚಾಗಿದೆ. ಮನೆಯ ಜವಾಬ್ದಾರಿ ಹೊತ್ತವರು ಈ ರೀತಿ ದುರಂತವಾಗಿ ಸತ್ತಾಗ ನಂಬಿದವರ ಪರಿಸ್ಥಿತಿ ಏನಾಗಬಹುದು.













