Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಯುಸಿ ಫಲಿತಾಂಶದಲ್ಲಿ ಭಾರೀ ಗೊಂದಲ: 100ಕ್ಕೆ 111, 600ಕ್ಕೆ 683 ಅಂಕ ನೀಡಿ ಮಂಡಳಿ ಎಡವಟ್ಟು!

---Advertisement---

ದ್ವಿತೀಯ ಪಿಯುಸಿ ಫಲಿತಾಂಶ ಈ ಬಾರಿ ಐತಿಹಾಸಿಕ ಸಾಧನೆ ಮಾಡಿದೆ ಎಂದು ಸಚಿವರು ಹಾಗೂ ಶಿಕ್ಷಣ ಇಲಾಖೆ ಹೆಮ್ಮೆ ವ್ಯಕ್ತಪಡಿಸುತ್ತಿರುವ ನಡುವೆಯೇ, ಪರೀಕ್ಷಾ ಮಂಡಳಿಯ ದೊಡ್ಡ ಎಡವಟ್ಟು ಬೆಳಕಿಗೆ ಬಂದಿದೆ.100 ಅಂಕಗಳ ಪ್ರಶ್ನೆಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬರಿಗೆ 111 ಅಂಕಗಳನ್ನು ನೀಡಿರುವ ಘಟನೆ ಫಲಿತಾಂಶದ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತಾಗಿದೆ.

ಅಂಕ ಸುಧಾರಣೆಗಾಗಿ ಮರುಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಹಿಂದಿ ವಿಷಯದಲ್ಲಿ ಈ ತಪ್ಪು ಸಂಭವಿಸಿದೆ. ಥಿಯರಿ ಪರೀಕ್ಷೆಯಲ್ಲಿ 94 ಅಂಕ ಪಡೆದಿದ್ದ ವಿದ್ಯಾರ್ಥಿಗೆ, ಕಾಲೇಜು ನೀಡಿದ 17 ಆಂತರಿಕ ಅಂಕಗಳನ್ನು ಸೇರಿಸಿ ಒಟ್ಟು 111 ಅಂಕ ಎಂದು ನಮೂದಿಸಲಾಗಿದೆ.ಗರಿಷ್ಠ 100 ಅಂಕಗಳ ವಿಷಯದಲ್ಲಿ 111 ಅಂಕ ನೀಡಿರುವುದು ಪೋಷಕರು ಮತ್ತು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ತಪ್ಪು ಮಾನವೀಯ ದೋಷವೇ ಅಥವಾ ತಾಂತ್ರಿಕ ಲೋಪವೇ ಎಂಬ ಪ್ರಶ್ನೆ ಉದ್ಭವಿಸಿದೆ. ಇಂತಹ ಗಂಭೀರ ಪ್ರಮಾದದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವ ಆತಂಕ ವ್ಯಕ್ತವಾಗಿದೆ.

ಇದರ ನಡುವೆ ಮತ್ತೊಂದು ಆಘಾತಕಾರಿ ಘಟನೆ ಕೂಡ ಬೆಳಕಿಗೆ ಬಂದಿದೆ. 600 ಅಂಕಗಳ ಪರೀಕ್ಷೆಗೆ ವಿದ್ಯಾರ್ಥಿಯೊಬ್ಬರಿಗೆ 683 ಅಂಕ ನೀಡಿರುವುದಾಗಿ ವರದಿಯಾಗಿದೆ. ಅಧಿಕೃತ ಡಿಜಿಲಾಕರ್ ಅಂಕಪಟ್ಟಿಯಲ್ಲಿ ಅಂಕಗಳು ಸರಿಯಾಗಿದ್ದರೂ, Karresults ವೆಬ್‌ಸೈಟ್‌ನಲ್ಲಿ ತಾಂತ್ರಿಕ ದೋಷದಿಂದ ತಪ್ಪು ಅಂಕಗಳು ಪ್ರದರ್ಶನಗೊಂಡಿವೆ ಎಂದು ತಿಳಿದುಬಂದಿದೆ.

ವಿಶೇಷವಾಗಿ ಮರುಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಇಂತಹ ದೊಡ್ಡ ಪ್ರಮಾದಗಳು ಸಂಭವಿಸಿರುವುದು ಇಲಾಖೆಯ ಕಾರ್ಯವೈಖರಿಯ ಮೇಲೆ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದೆ. ಸಚಿವರು ‘ಐತಿಹಾಸಿಕ ಫಲಿತಾಂಶ’ ಎಂದು ಹೇಳುತ್ತಿರುವ ಸಂದರ್ಭದಲ್ಲೇ ಇಂತಹ ಎಡವಟ್ಟುಗಳು ಹೊರಬಂದಿರುವುದು ಪೋಷಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿದೆ.

ಈ ತಪ್ಪಿಗೆ ಯಾರು ಹೊಣೆ? ಮತ್ತು ವಿದ್ಯಾರ್ಥಿಗಳ ಫಲಿತಾಂಶವನ್ನು ಸರಿಪಡಿಸಲು ಮಂಡಳಿ ಯಾವ ಕ್ರಮ ಕೈಗೊಳ್ಳಲಿದೆ? ಎಂಬುದರ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರು ಸ್ಪಷ್ಟ ಉತ್ತರಕ್ಕಾಗಿ ಕಾಯುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...