Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾನೂನು ಎಲ್ಲರಿಗೂ ಸಮಾನವೇ? ಈ ಎರಡು ಹುದ್ದೆಗಳಿಗೆ ಮಾತ್ರ ವಿನಾಯಿತಿ!

---Advertisement---

ಭಾರತದಲ್ಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಾಮಾನ್ಯ ನಂಬಿಕೆ. ಆದರೆ ಸಂವಿಧಾನವು ದೇಶದ ಎರಡು ಪ್ರಮುಖ ಹುದ್ದೆಗಳಿಗೆ ವಿಶೇಷ ರಕ್ಷಣೆಯನ್ನು ಒದಗಿಸಿದೆ. ಅವರು ಅಧಿಕಾರದಲ್ಲಿ ಇರುವವರೆಗೆ ಅವರನ್ನು ಪೊಲೀಸರು ಅರೆಸ್ಟ್ ಮಾಡಲಾಗುವುದಿಲ್ಲ, ನ್ಯಾಯಾಲಯಗಳು ಕೂಡ ಕ್ರಿಮಿನಲ್ ವಿಚಾರಣೆ ಆರಂಭಿಸಲು ಸಾಧ್ಯವಿಲ್ಲ.

ಈ ವಿಶೇಷ ಸೌಲಭ್ಯವನ್ನು ಪಡೆಯುವವರು ದೇಶದ ರಾಷ್ಟ್ರಪತಿ ಹಾಗೂ ರಾಜ್ಯಗಳ ರಾಜ್ಯಪಾಲರು. ಇವರಿಗೆ ಈ ರಕ್ಷಣೆಯನ್ನು ಭಾರತೀಯ ಸಂವಿಧಾನದ ಆರ್ಟಿಕಲ್ 361 ಅಡಿಯಲ್ಲಿ ನೀಡಲಾಗಿದೆ.
ಈ ನಿಯಮದ ಪ್ರಕಾರ, ರಾಷ್ಟ್ರಪತಿ ಅಥವಾ ರಾಜ್ಯಪಾಲರು ತಮ್ಮ ಅಧಿಕೃತ ಕರ್ತವ್ಯಗಳಲ್ಲಿ ತೆಗೆದುಕೊಂಡ ನಿರ್ಧಾರಗಳಿಗೆ ನ್ಯಾಯಾಲಯಗಳಿಗೆ ಉತ್ತರಿಸಬೇಕಾಗಿಲ್ಲ. ಅವರು ಅಧಿಕಾರದಲ್ಲಿರುವವರೆಗೆ ಯಾವುದೇ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲು ಅಥವಾ ಮುಂದುವರಿಸಲು ಅವಕಾಶವಿಲ್ಲ. ಹಾಗೆಯೇ, ಅವರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸುವುದೂ ಸಾಧ್ಯವಿಲ್ಲ.

ಈ ರಕ್ಷಣೆ ನೀಡಿರುವುದಕ್ಕೆ ಪ್ರಮುಖ ಕಾರಣವೆಂದರೆ, ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗಳ ಗೌರವವನ್ನು ಕಾಪಾಡುವುದು. ರಾಜಕೀಯ ದ್ವೇಷದಿಂದ ಪ್ರಕರಣಗಳನ್ನು ದಾಖಲಿಸಿ, ಅರೆಸ್ಟ್ ಮಾಡುವಂತಹ ಪರಿಸ್ಥಿತಿ ಉಂಟಾದರೆ, ಆಡಳಿತ ವ್ಯವಸ್ಥೆಯ ಕಾರ್ಯಕ್ಷಮತೆ ಕುಂದುತ್ತದೆ ಎಂಬ ಕಾರಣದಿಂದ ಈ ವ್ಯವಸ್ಥೆ ಜಾರಿಯಲ್ಲಿದೆ.ಆದರೆ ಸಿವಿಲ್ ಪ್ರಕರಣಗಳ ವಿಷಯದಲ್ಲಿ ಸ್ವಲ್ಪ ವಿನಾಯಿತಿ ಇದೆ. ವೈಯಕ್ತಿಕ ವಿಚಾರಗಳಿಗೆ ಸಂಬಂಧಿಸಿದಂತೆ ಸಿವಿಲ್ ಪ್ರಕರಣಗಳನ್ನು ದಾಖಲಿಸಬಹುದಾದರೂ, ಅದಕ್ಕೂ ಮುನ್ನ ಕನಿಷ್ಠ ಎರಡು ತಿಂಗಳ ಲಿಖಿತ ನೋಟಿಸ್ ನೀಡುವುದು ಕಡ್ಡಾಯ.

ಈ ವಿಶೇಷ ಹಕ್ಕುಗಳು ಶಾಶ್ವತವಲ್ಲ. ಅವರು ಅಧಿಕಾರದಲ್ಲಿರುವವರೆಗೆ ಮಾತ್ರ ಅನ್ವಯಿಸುತ್ತವೆ. ಅಧಿಕಾರಾವಧಿ ಮುಗಿದ ಬಳಿಕ, ರಾಷ್ಟ್ರಪತಿ ಅಥವಾ ರಾಜ್ಯಪಾಲರು ಸಾಮಾನ್ಯ ನಾಗರಿಕರಂತೆ ಕಾನೂನಿನ ಅಡಿಯಲ್ಲಿ ಬರುತ್ತಾರೆ. ಆ ಸಂದರ್ಭದಲ್ಲಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಕ್ಕೂ, ಅಗತ್ಯವಿದ್ದರೆ ಅರೆಸ್ಟ್ ಮಾಡುವುದಕ್ಕೂ ಅವಕಾಶವಿರುತ್ತದೆ.ಇದೇ ವೇಳೆ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು, ಸಂಸದರು ಅಥವಾ ಶಾಸಕರು ಈ ರೀತಿಯ ಸಂಪೂರ್ಣ ರಕ್ಷಣೆಯನ್ನು ಹೊಂದಿಲ್ಲ. ಕ್ರಿಮಿನಲ್ ಪ್ರಕರಣಗಳಲ್ಲಿ ಕಾನೂನು ಎಲ್ಲರ ಮೇಲೂ ಸಮಾನವಾಗಿ ಅನ್ವಯಿಸುತ್ತದೆ.
ಒಟ್ಟಿನಲ್ಲಿ, ಈ ನಿಯಮವು ದೇಶದ ಸಾಂವಿಧಾನಿಕ ಹುದ್ದೆಗಳ ಘನತೆಯನ್ನು ಉಳಿಸುವ ಉದ್ದೇಶದಿಂದ ರೂಪುಗೊಂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...