ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 11 : ಪಿಳ್ಳೆಕೆರೇನಹಳ್ಳಿಯ ಬಾಪೂಜಿ ಸಮೂಹ ಸಂಸ್ಥೆ ಆವರಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ರಂಗ ಸೌರಭ ಕಲಾಸಂಘ, ಬಾಪೂಜಿ ಸಮೂಹ ಸಂಸ್ಥೆಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಶಿವಸಂಚಾರ ನಾಟಕೋತ್ಸವ 26 ಅಂಗವಾಗಿ ಮೂರು ನಾಟಕಗಳ ಪ್ರದರ್ಶನವನ್ನು ಏಪ್ರಿಲ್ 12 ರಿಂದ 14ರವರೆಗೆ ಪ್ರತಿದಿನ ಸಂಜೆ 6-30ಕ್ಕೆ ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 12ರಂದು ಸಂಜೆ 6-30ಕ್ಕೆ ಪರಮಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರಚಿತ ಜಂಗಮದಡೆಗೆ ನಾಟಕ ಆರ್. ಜಗದೀಶ್ ನಿರ್ದೇಶನದಲ್ಲಿ ಶಿವಾಸಂಚಾರ ಕಲಾವಿದರು ಅಭಿನಯಿಸಲಿದ್ದಾರೆ.

13 ರಂದು ಸಂಜೆ 6:30ಕ್ಕೆ ಕೃಷ್ಣಮೂರ್ತಿ ಮೂಡಬಾಗಿಲು ಇವರ ರಚನೆ, ನಿರ್ದೇಶನ, ವಿನ್ಯಾಸ ಪರಿಕಲ್ಪನೆಯಲ್ಲಿ ಕಳ್ಳರಸಂತೆ ನಾಟಕ ಪ್ರದರ್ಶನಗೊಳ್ಳಲಿದೆ.
ಏಪ್ರಿಲ್ 14ರಂದು ಸಂಜೆ 6-30 ಕ್ಕೆ ಪರಮಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರಚಿತ ಶಿವಯೋಗಿ ಸಿದ್ದರಾಮೇಶ್ವರ ನಾಟಕ ಪ್ರದರ್ಶನಗೊಳ್ಳಲಿದೆ.
ಶಿವ ಸಂಚಾರದ ನಾಟಕ ಪ್ರದರ್ಶನಗಳ ಕಾರ್ಯಕ್ರಮಕ್ಕೆ ನಗರದ ಸಮಸ್ತ ಕಲಾವಿದರು, ಸಾಹಿತಿಗಳು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಂಗ ನಿರ್ದೇಶಕ ಕೆ.ಪಿ.ಎಂ ಗಣೇಶಯ್ಯ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.












