Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಏಪ್ರಿಲ್ 12ರಿಂದ 18 ರವರೆಗೆ ದ್ಯಾಮವ್ವನಹಳ್ಳಿಯಲ್ಲಿ ಎನ್‌ಎಸ್‌ಎಸ್‌ ಶಿಬಿರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 11 : ನಗರದ ಡಾನ್‌ ಬೋಸ್ಕೋ ಪದವಿ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದಿಂದ ಏ.12ರಿಂದ 18ರವರೆಗೆ ತಾಲ್ಲೂಕಿನ ದ್ಯಾಮವ್ವನಹಳ್ಳಿಯಲ್ಲಿ ವಿಕಸಿತ ಭಾರತದೆಡೆಗೆ ಯುವ ಜನತೆ ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರ ಹಮ್ಮಿಕೊಳ್ಳಲಾಗಿದೆ.

 

ಏ.12 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮದಲ್ಲಿ ಶಿಬಿರಾರ್ಥಿಗಳ ಪಥ ಸಂಚಲನ ನಡೆಯಲಿದ್ದು, ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ರಘು ಉದ್ಘಾಟನೆ ನೆರವೇರಿಸಲಿದ್ದು, ಸಂಸ್ಥೆ ಆಡಳಿತಾಧಿಕಾರಿ ಫಾ.ಫೆಲಿಕ್ಸ್‌ ಸೇರಾವೋ, ಪ್ರಾಂಶುಪಾಲ ಫಾ.ಸಿ.ಬೆನ್ನಿ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಜೆ.ಜಯಸಿಂಹ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್‌.ರಾಜೇಶ್ವರಿ, ಅರಿವು ಕೇಂದ್ರ ಮೇಲ್ವಿಚಾರಕ ಎಚ್‌.ಲೋಕೇಶ್‌ ಉಪಸ್ಥಿತಿವಹಿಸಲಿದ್ದಾರೆ.

 

13 ರಂದು ಬೆಳಿಗ್ಗೆ 7.30ಕ್ಕೆ ಪ್ರಾಧ್ಯಾಪಕಿ ಆಯೇಷಾ ರೆಹಮಾನ್‌ ಧ್ವಜಾರೋಹಣ ನೆರವೇರಿಸಲಿದ್ದು, ಮಧ್ಯಾಹ್ನ 3ಕ್ಕೆ ದಿನಪತ್ರಿಕೆ ಮಹತ್ವ ಕುರಿತ ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಮಾದಾರ ಚನ್ನಯ್ಯ ಗುರುಪೀಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್‌.ರಾಘವೇಂದ್ರ, ಎನ್‌ಎಸ್‌ಎಸ್‌ ಅಧಿಕಾರಿ ಎನ್‌.ಧನಕೋಟಿ ಭಾಗವಹಿಸಲಿದ್ದಾರೆ.

ಏಪ್ರಿಲ್ 14 ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಎನ್‌.ಚೇತನ್‌ ಕುಮಾರ್‌, ಎಂ.ಎಸ್‌.ಸೌಮ್ಯ ಮಾತನಾಡಲಿದ್ದಾರೆ.

ಏಪ್ರಿಲ್ 15 ರಂದು ಬೆಳಿಗ್ಗೆ 10.30ಕ್ಕೆ ಬೃಹತ್‌ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆಯನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್‌ ವಹಿಸಲಿದ್ದಾರೆ.

ಏಪ್ರಿಲ್ 16 ರಂದು ಮಧ್ಯಾಹ್ನ 12 ಗಂಟೆಗೆ ಅಗ್ನಿಶಾಮಕ ಪ್ರಾತ್ಯಕ್ಷಿಕೆ, ಸಂಜೆ 6ಕ್ಕೆ ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಕುರಿತು ದತ್ತ ಚಾರಿಟಬಲ್‌ ಟ್ರಸ್ಟ್‌ ಯೋಜನಾ ನಿರ್ದೇಶಕ ಎಚ್‌.ಮಹಮ್ಮದ್‌ ಶೌಕತ್‌ ಆಲಿ ಉಪನ್ಯಾಸ ನೀಡಲಿದ್ದಾರೆ.

ಏಪ್ರಿಲ್ 17 ರಂದು ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ದೀಪೋತ್ಸವ, ಏಪ್ರಿಲ್ 18 ರಂದು ಬೆಳಿಗ್ಗೆ 10ಕ್ಕೆ ಸಮಾರೋಪ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಬಿ.ಎಂ.ಗುರುನಾಥ್‌ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಜಿಲ್ಲಾ ನೋಡಲ್‌ ಅಧಿಕಾರಿ ಎನ್‌.ಧನಕೋಟಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now