ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ನಿವಾಸದಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಮ್ಮಗಳನ್ನು ಕಳೆದುಕೊಂಡ ಯಡಿಯೂರಪ್ಪ ಅವರಿಗೆ ಎಲ್ಲರೂ ಸಾಂತ್ವನ ಹೇಳಿದ್ದಾರೆ.
ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಾಂತ್ವನ ತಿಳಿಸಿದ್ದಾರೆ. ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ನನ್ನ ಧೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು.
ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ. ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.