Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ 15032 ಜನರಿಗೆ ಉದ್ಯೋಗಾವಕಾಶ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಬೆಂಗಳೂರು, ಏಪ್ರಿಲ್ 13: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು.

ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆಯಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ/ ವಿಸ್ತರಣಾ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1982 ಉದ್ಯೋಗ ಸೃಷ್ಟಿಯಾಗುತ್ತಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ,ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್,ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...