Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಳಲ್ಕೆರೆ | ಚಿತ್ರಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪಿಯು ಕಾಲೇಜಿಗೆ ಶೇ.97.50 ಫಲಿತಾಂಶ

---Advertisement---

 

ಚಿತ್ರದುರ್ಗ. ಏ.14 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.97.50ರಷ್ಟು ಫಲಿತಾಂಶ ಲಭಿಸಿದೆ.
ಕಾಲೇಜಿನಿಂದ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 80 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 54 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಎಂ.ಸೌಮ್ಯ (570 ಅಂಕಗಳೊಂದಿಗೆ ಶೇ.95), ಸಿ.ಆರ್.ಚಿನ್ನು (564 ಅಂಕಗಳೊಂದಿಗೆ ಶೇ.94) ಹಾಗೂ ಎಂ.ಸತೀಶ್ (559 ಅಂಕಗಳೊಂದಿಗೆ ಶೇ.93.16) ಅವರು ಕಾಲೇಜಿನ ಟಾಪರ್‍ಗಳಾಗಿದ್ದಾರೆ.

ವಿದ್ಯಾರ್ಥಿಗಳ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...