Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಜಿಲ್ಲಾ ಪಂಚಾಯಿತಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿ ಉಪ ಕಾರ್ಯದರ್ಶಿ ಮೂಲಕ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.

 

ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಡಿಸೆಂಬರ್‍ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಸರ್ಕಾರದ ಗಮನ ಸೆಳೆಯಲಾಗಿತ್ತೆಂದು ಪ್ರತಿಭಟನಾನಿರತರು ಉಪ ಕಾರ್ಯದರ್ಶಿಗಳ ಗಮನ ಸೆಳೆದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಡಿ.ಎಂ.ಮಲಿಯಪ್ಪ ಮಾತನಾಡಿ ತಾವೆ ಒಪ್ಪಿಕೊಂಡಿರುವ ಪ್ರಕಾರ ಎಲ್ಲಾ ನೌಕರರಿಗೆ ಐದು ಸಾವಿರ ರೂ.ವೇತನ ಹೆಚ್ಚಿಸಿ ಇಲಾಖೆಯಿಂದ ಆದೇಶ ಹೊರಡಿಸಬೇಕು. ನೌಕರರು ನಿವೃತ್ತಿಯಾದರೆ, ನಿಧನ ಹೊಂದಿದರೆ ಇಡಿಗಂಟು ಆರು ಲಕ್ಷ ರೂ.ಗಳನ್ನು ಕೊಡಬೇಕು. ಸೇವಾ ಹಿರಿತನದ ಆಧಾರದಲ್ಲಿ ವೇತನ ನೀಡಬೇಕು. ಸ್ವಚ್ಚವಾಹಿನಿ ನೌಕರರ ಸಭೆ ಕರೆದು ಅವರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಪ್ರತಿಯೊಂದು ಪಂಚಾಯಿತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ತುಂಬಬೇಕು.

 

ಕಳೆದ 18-20 ವರ್ಷಗಳಿಂದ ಡಾಟಾ ಎಂಟ್ರಿ ಆಪರೇಟರ್‍ಗಳಾಗಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಅನುಮೋದನೆ ಕೊಡಬೇಕು. 2 ನೇ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿಯಾಗಬೇಕು. ಈಗಾಗಲೆ ಆರೋಗ್ಯದ ಕುರಿತು ಸಿಬ್ಬಂದಿಗಳ ಮಾಹಿತಿಗಾಗಿ ಫಾರ್ಮೆಟ್ ಕಳಿಸಿದ್ದೀರ. ಅದರಲ್ಲಿ ಗುತ್ತಿಗೆ, ಹೊರಗುತ್ತಿಗೆ, ಗೌರವ ಧನ, ಕಾರ್ಮಿಕರ ಮಾಹಿತಿ ನೀಡಲು ಸೂಚಿಸಿದ್ದು, ಆದರೆ ಈ ಫಾರ್ಮೆಟ್‍ನಲ್ಲಿ ಪಂಚಾಯಿತಿ ನೌಕರರೆಂದು ಮಾಹಿತಿ ಇಲ್ಲದಿರುವುದನ್ನು ಸರಿಪಡಿಸಿ ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯನ್ನು ಒತ್ತಾಯಿಸಿದರು.

 

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ವಿ.ರಂಗನಾಥ್, ಜಯಲಕ್ಷ್ಮಿ, ಶಶಿ, ವೆಂಕಟೇಶ್, ಸೀನಪ್ಪ, ಮಾರಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now