ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 18 : ಚಿತ್ರದುರ್ಗ ಹಾಗೂ ಹೊಳಲ್ಕೆರೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಚಿತ್ರಹಳ್ಳಿ ಬಳಿ ಕಾರ್- ಬೈಕ್ ನಡುವೆ ಶುಕ್ರವಾರ ರಾತ್ರಿ 10 ಗಂಟೆ ಸುಮಾರಾಗಿ ಭೀಕರ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ
ಘಟನೆ ನಡೆದಿದೆ.
ಯಶವಂತ್ (30 ವರ್ಷ) ವಾಸುದೇವ್ (43 ವರ್ಷ) ಮೃತ ದುರ್ದೈವಿಗಳು. ಮೃತರಿಬ್ಬರು ಹೊಳಲ್ಕೆರೆ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರು ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಅಪಘಾತ
ಸಂಭವಿಸಿದೆ. ಬೈಕ್ ನಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಅಪಘಾತ ಜರುಗಿದೆ. ಸ್ಥಳಕ್ಕೆ ಚಿತ್ರಹಳ್ಳಿ ಗೇಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
















