Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ನಿಂದ ಬಸವಣ್ಣನವರ ಆಶಯಗಳಿಗೆ ಅಪಮಾನ : ಜಿ.ಹೆಚ್.ಮೋಹನ್‍ಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ವಿಶ್ವಗುರು ಬಸವಣ್ಣನವರ ಆಶಯಗಳಿಗೆ ಕಾಂಗ್ರೆಸ್‍ನವರು ಅಪಮಾನ ಮಾಡುತ್ತಿದ್ದಾರೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್‍ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಜಗಜ್ಯೋತಿ ಬಸವೇಶ್ವರರ 893 ನೇ ಜಯಂತಿ ಅಂಗವಾಗಿ ಬಿಜೆಪಿ.ಕಚೇರಿಯಲ್ಲಿ ಸೋಮವಾರ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

 

ಕೇಂದ್ರದಲ್ಲಿ ಮಹಿಳಾ ಮೀಸಲಾತಿಗೆ ವಿರೋಧಿಸುತ್ತಿರುವ ಕಾಂಗ್ರೆಸ್ ನಾಯಕರುಗಳಿಗೆ ಬಸವಣ್ಣನವರ ಜಯಂತಿ ಆಚರಿಸುವ ನೈತಿಕತೆಯಿಲ್ಲ. ಹನ್ನೆರಡನೆ ಶತಮಾನದಲ್ಲಿಯೇ ಬಸವಣ್ಣನವರು ಅಸಮಾನತೆ ವಿರುದ್ದ ಹೋರಾಡಿದರು. ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸ್ತ್ರೀಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಎತ್ತಿಹಿಡಿದಂತ ಸಮ ಸಮಾಜದ ಹರಿಕಾರ ಎಂದು ಬಣ್ಣಿಸಿದರು.

 

ಅಂತರ್ಜಾತಿ ವಿವಾಹವನ್ನು ಮುನ್ನೆಲೆಗೆ ತಂದ ಬಸವಣ್ಣನವರು ಲಿಂಗ ತಾರತಮ್ಯ ವಿರೋಧಿಸಿದರು. ಅಂತರ್ಜಾತಿ ವಿವಾಹಕ್ಕೆ ಸಂಬಂಧಿಸಿದಂತೆ 3500 ಅರ್ಜಿಗಳು ಸಲಿಕೆಯಾಗಿದ್ದರೂ ರಾಜ್ಯ ಸರ್ಕಾರ ಇನ್ನು ಅನುದಾನ ನೀಡಿಲ್ಲ. ಜನರನ್ನು ಮರಳು ಮಾಡುತ್ತಿದೆಯೇ ವಿನಃ ಬಸವನ ತತ್ವ ಸಂದೇಶಗಳನ್ನು ಪಾಲಿಸುತ್ತಿಲ್ಲ. ಸಾರ್ವಕಾಲಿಕ ಸತ್ಯವಾಗಿರುವ ಬಸವಣ್ಣನವರ ನಡೆ-ನುಡಿ-ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ಜಯಂತಿಗೆ ನಿಜವಾದ ಅರ್ಥ ಸಿಗುತ್ತದೆಂದು ಹೇಳಿದರು.

 

ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ ಹನ್ನೆರಡನೆ ಶತಮಾನದಲ್ಲಿ ಸಮಾಜ ಸುಧಾರಣೆಗಾಗಿ ಹೋರಾಡಿದ ಬಸವಣ್ಣನವರ ಜಯಂತಿಯನ್ನು ವಿಶ್ವದಲ್ಲಿಯೇ ಆಚರಿಸಲಾಗುತ್ತಿದೆ. ಮೂಢನಂಬಿಕೆ, ಮೌಢ್ಯ, ಕಂದಾಚಾರಗಳನ್ನು ನಿರ್ಮೂಲನೆಗೊಳಿಸಿ ಸಮ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿ ಮಾಡಿದ ಬಸವಣ್ಣನವರು ಅನುಭವ ಮಂಟಪದಲ್ಲಿ ಎಲ್ಲಾ ಜಾತಿಯವರಿಗೆ ಮುಕ್ತವಾಗಿ ಪ್ರವೇಶ ಕಲ್ಪಿಸಿದ್ದರು. ಅನೇಕ ವಚನಕಾರರಿದ್ದಾರೆಂದರೆ ಅದಕ್ಕೆ ಬಸವಣ್ಣನವರೆ ಕಾರಣ ಎಂದರು.

 

ದೇಶದ ಪ್ರಧಾನಿ ನರೇಂದ್ರಮೋದಿರವರು ಬಸವಣ್ಣನವರ ಆದರ್ಶಗಳನ್ನು ತಮ್ಮ ಭಾಷಣಗಳಲ್ಲಿ ನೆನಪಿಸಿಕೊಳ್ಳುತ್ತಾರೆ. ಮನುಕುಲಕ್ಕೆ ಅವರ ಮಾರ್ಗದರ್ಶನ ಬೇಕು. ಸಮಾನತೆಯ ಹರಿಕಾರ ಬಸವಣ್ಣನವರ ತತ್ವಗಳನ್ನು ಎಲ್ಲರೂ ಪಾಲಿಸಬೇಕಿದೆ ಎಂದು ನುಡಿದರು.

 

ಬಿಜೆಪಿ.ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್‍ಯಾದವ್, ಜಿಲ್ಲಾ ಕಾರ್ಯದರ್ಶಿಗಳಾದ ರೇಖ, ಪಾಲಯ್ಯ, ವಕ್ತಾರ ನಾಗರಾಜ್‍ಬೇದ್ರೆ, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಗ್ರಾಮಾಂತರ ಮಾಜಿ ಅಧ್ಯಕ್ಷ ಕಲ್ಲೇಶಯ್ಯ, ನಗರ ಪ್ರಧಾನ ಕಾರ್ಯದರ್ಶಿ ಬಸವೇಶ್, ನಗರ ಯುವ ಮೋರ್ಚಾ ಅಧ್ಯಕ್ಷ ವಸಂತ ಆಚಾರ್, ಬಸಮ್ಮ, ಶಾಂತಮ್ಮ, ವೀಣ, ಮಂಜುಳಮ್ಮ, ಉಮಾ, ಶಂಭು, ವೀರೇಶ್, ಲಕ್ಷ್ಮಿಸಾಗರ ವಸಂತ್, ಸತೀಶ್‍ಆಚಾರ್, ಪಿ.ಮಹಂತೇಶ್ ಇನ್ನು ಅನೇಕರು ಬಸವ ಜಯಂತಿಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...