ಚಿತ್ರದುರ್ಗ : ಏ.20: ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಸೋಮವಾರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಶ್ರೀ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದ ಮುಂಭಾಗ ಸಾರೋಟಿನಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ನಾದಸ್ವರ, ತ್ರಾಷ್ ವಾದ್ಯ, ಚಂಡೆ ವಾದನ, ವೀರಗಾಸೆ, ಯಕ್ಷಗಾನ, ಕಹಳೆ ನಾದ, ಬ್ರಾಸ್ ಬ್ಯಾಂಡ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರಗು ನೀಡಿದವು. ನಗರದ ನೀಲಕಂಠೇಶ್ವರ ದೇಗುಲದಿಂದ ಪ್ರಾರಂಭವಾದ ಮೆರವಣಿಗೆಯು ಆನೆಬಾಗಿಲು, ದೊಡ್ಡಪೇಟೆ, ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ ಮಾರ್ಗವಾಗಿ ಶ್ರೀ ನೀಲಕಂಠೇಶ್ವರ ದೇವಸ್ಥಾನದವರೆಗೂ ನಡೆಯಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಸೇರಿದಂತೆ ವೀರಶೈವ ಸಮಾಜದ ಮುಖಂಡರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











