ಆದಿಚುಂಚನಗಿರಿ ಭೈರವೈಕ್ಯ ಮಂದಿರ ಉದ್ಘಾಟನೆ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬಂದಿದ್ದರು. ಈ ವೇಳೆ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ, ಸ್ವಾಗತಕೋರಿದ್ದರು. ಆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನೋ ಪಿಸುಗುಟ್ಟಿದ್ದರು. ಆ ಫೋಟೋ ಅಂತು ಬಹಳ ಚಂದವಾಗಿ ವೈರಲ್ ಆಗಿತ್ತು. ಆ ಫೋಟೋಗೆ ನಾನಾ ಹೋಲಿಕೆಯ ಸಾಲುಗಳು ಬಂದಿದ್ದವು. ಆದರೆ ಸತ್ಯ ಏನು ಎಂಬುದನ್ನ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ.

ಅಂದು ನಮ್ಮ ನಡುವೆ ಅಂತ ಯಾವುದೇ ಗುಪ್ತ ಆಲೋಚನೆಗಳು ನಡೆದಿಲ್ಲ. ಮಹಿಳಾ ಮೀಸಲಾತಿ ಕುರಿತ ನನ್ನ ಅಭಿಪ್ರಾಯವನ್ನು ಪ್ರಧಾನಿ ಕೇಳಿದರು ಅಷ್ಟೇ. ಮಹಿಳಾ ಮೀಸಲಾತಿಯ ಪರವಾಗಿದ್ದೇನೆ ಎಂಬ ಸಕಾರಾತ್ಮಕ ಉತ್ತರವನ್ನೇ ನೀಡಿದ್ದೇನೆ. ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿಯವರಿಗೆ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆಯಿದ್ದರೆ 2023ರಲ್ಲಿಯೇ ಮೀಸಲಾತಿಯನ್ನು ಜಾರಿಗೆ ತರಬೇಕಿತ್ತು. ಮೀಸಲಾತಿ ಜಾರಿಗೆ ನಮ್ಮ ಅಭ್ಯಂತರವಿಲ್ಲ. ಆದರೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಲ್ಲಿ ದಕ್ಷುಣ ಭಾರತದ ರಾಜ್ಯಗಳಿಗರ ಅನ್ಯಾಯವಾಗಬಾರದು.
ಜನಸಂಖ್ಯಾ ನಿಯಂತ್ರಣ ಮಾಡಿರುವ ದಕ್ಷಿಣದ ರಾಜ್ಯಗಳ ಹಿತರಕ್ಷಣೆಗೆ ಹೊಸ ಜನಗಣತಿಯ ಆಧಾರದ ಮೇಲೆ ಸಮಾನ ಹಂಚಿಕೆಯಾಗಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದರು. ತಮಿಳುನಾಡು ಮತ್ತು ಕೇರಳ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಲಿದೆ ಎಂದು ಆತ್ಮ ವಿಶ್ವಾಸದ ಮಾತುಗಳನ್ನ ಆಡಿದ್ದಾರೆ.
















