Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಳಲ್ಕೆರೆ ನ್ಯಾಯಾಲಯ ಆವರಣದಲ್ಲಿ ಕ್ಯಾಂಟೀನ್ ಆರಂಭಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ

---Advertisement---

ಸುದ್ದಿಒನ್. ಏ.21: ಹೊಳಲ್ಕೆರೆ ತಾಲ್ಲೂಕು ನ್ಯಾಯಾಲಯದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕ್ಯಾಂಟೀನ್ ನಡೆಸಲು ಆಸಕ್ತ ಹೋಟೆಲ್ ಉದ್ಯಮಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತು ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಅಧಿಸೂಚನೆ ಹೊರಡಿಸಿದ್ದಾರೆ.

ಆಸಕ್ತರು ಸಿದ್ಧಪಡಿಸುವ ಆಹಾರ ಪದಾರ್ಥಗಳ ಪಟ್ಟಿ, ಅದರ ತೂಕ ಮತ್ತು ಬೆಲೆಯನ್ನು ನಮೂದಿಸಿ ಮೊಹರು ಮಾಡಿದ ಕೊಟೇಷನ್ ಅನ್ನು ಏಪ್ರಿಲ್ 27ರ ಸಂಜೆ 5:00 ಗಂಟೆಯೊಳಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಕಚೇರಿ ಸಲ್ಲಿಸಬೇಕು. ಅರ್ಜಿಗಳನ್ನು ಏಪ್ರಿಲ್ 28 ರಂದು ಸಂಜೆ 5:00 ಗಂಟೆಗೆ ಜಿಲ್ಲಾ ನ್ಯಾಯಾಧೀಶರ ಸಮ್ಮುಖದಲ್ಲಿ ತೆರೆಯಲಾಗುವುದು.

ಆಯ್ಕೆಯಾದ ಹೋಟೆಲ್ ಉದ್ದಿಮೆದಾರರಿಗೆ ಆರಂಭದಲ್ಲಿ 11 ತಿಂಗಳ ಅವಧಿಗೆ ಪರವಾನಗಿ ನೀಡಲಾಗುವುದು. ಸೇವೆಯ ಆಧಾರದ ಮೇಲೆ ಇದನ್ನು ಗರಿಷ್ಠ 3 ವರ್ಷಗಳವರೆಗೆ ವಿಸ್ತರಿಸಲು ಅವಕಾಶವಿರುತ್ತದೆ. ಆಯ್ಕೆಯಾದವರು ರೂ.25,000 ಭದ್ರತಾ ಠೇವಣಿ ಇಡಬೇಕು. ಲೋಕೋಪಯೋಗಿ ಇಲಾಖೆಯ ನಿಯಮದಂತೆ ಮಾಸಿಕ ಕನಿಷ್ಠ ಪರವಾನಗಿ ಶುಲ್ಕವನ್ನು ರೂ.25,000 ಎಂದು ನಿಗದಿಪಡಿಸಲಾಗಿದ್ದು, ವಿದ್ಯುತ್ ಮತ್ತು ನೀರು ಬಳಕೆಯ ವೆಚ್ಚ ಪ್ರತ್ಯೇಕವಾಗಿರುತ್ತದೆ. ನ್ಯಾಯಾಲಯದ ಕೆಲಸದ ದಿನಗಳಲ್ಲಿ ಮಾತ್ರ ಬೆಳಿಗ್ಗೆ 7:00 ರಿಂದ ಸಂಜೆ 6:30 ರವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗುವುದು. ಕ್ಯಾಂಟೀನ್ ನಡೆಸುವವರು ಆವರಣವನ್ನು ಅತ್ಯಂತ ಸ್ವಚ್ಛ ಮತ್ತು ಆರೋಗ್ಯಕರವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ. ಪರವಾನಗಿದಾರರು ಯಾವುದೇ ಕಾರಣಕ್ಕೂ ಉಪ-ಗುತ್ತಿಗೆ ನೀಡುವಂತಿಲ್ಲ. ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದರೆ ಅಥವಾ ನ್ಯಾಯಾಲಯದ ಕಾರ್ಯಕಲಾಪಗಳಿಗೆ ಅಡ್ಡಿಪಡಿಸಿದರೆ ಮುನ್ಸೂಚನೆ ಇಲ್ಲದೆ ಪರವಾನಗಿ ರದ್ದುಪಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಥವಾ ಹೊಳಲ್ಕೆರೆ ತಾಲ್ಲೂಕು ನ್ಯಾಯಾಲಯ ನೋಟಿಸ್ ಬೋರ್ಡ್ ಗಮನಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...